ಕೊರಟಗೆರೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚಿಸಿದ್ದು, ತುರ್ತು ಕ್ರಮ ಕೈಗೊಂಡು ಗ್ರಾಮೀಣ ಭಾಗದ ಜನರಿಗೆ ಶೀಘ್ರ ಶುದ್ಧ ನೀರು ಒದಗಿಸಿ ಜಿಪಿಎಸ್ ಆಧಾರಿತ ಫೋಟೊ ಹಾಗೂ ದಾಖಲೆ ಕಳಿಸುವಂತೆ ಆದೇಶಿಸಿದೆ.
ಗ್ರಾಮೀಣ ಭಾಗಗಳಲ್ಲಿ ಶುದ್ದೀಕರಣ ಘಟಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಮಾಧ್ಯಮ ವರದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ವಿಶೇಷ ಕರ್ತಾವ್ಯಾಧಿಕಾರಿ ಕೆ.ವೈಷ್ಣವಿ ಅವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿಗೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಅನುಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಿಗೆ ಅನುದಾನ ಬಿಡುಗಡೆಗೆ ಸೂಚಿಸಿದ್ದಾರೆ. ನೀರಿನ ಘಟಕಗಳ ದುರಸ್ತಿ ಕಾರ್ಯಾಚರಣೆ ಮತ್ತು ನಿರ್ಹವಣೆ ವೆಚ್ಚ ಸೇರಿದಂತೆ ಪರಿಷ್ಕೃತ ಕ್ರಿಯಾ ಯೋಜನೆ ಅಂದಾಜು ಪಟ್ಟಿಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧೀಕ್ಷಕರಿಗೆ ಸಲ್ಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


