ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ ಸಲಹೆಗಾರರಾದ ಹರೀಶ್ ಕರೆ ನೀಡಿದರು.
ನಗರದ ಬಾಲಕರ ಸ.ಪ.ಪೂ.ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ 3.0 ಅಡಿ, ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ಶ್ವಾಸಕೋಶ, ಬಾಯಿ, ಗಂಟಲು, ಗರ್ಭಕೋಶ ಮೊದಲಾದ ಕ್ಯಾನ್ಸರ್ ರೋಗಗಳಿಗೆ ತುತ್ತಾಗಿ ಯುವ ಜನರು ಜೀವವನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯವೆಂದರು. ಅದರಲ್ಲೂ 22% ಜನರು ಗುಟ್ಕಾ, ಪಾನ್ ಪರಾಗ್, ಜರ್ದಾ, ಹನ್ಸ್, ಬೀಡಾ, ಸಿಗರೇಟ್ ಮೊದಲಾದವುಗಳನ್ನು ಬಳಸುತ್ತಿರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಆರೋಗ್ಯಕ್ಕೆ ಹಾನಿಕರವಾದ ಇಂತಹ ದುಶ್ಚಟಗಳಿಗೆ ಹೆಚ್ಚು ಯುವಕರು ಬಲಿಯಾಗುತ್ತಿದ್ದಾರೆ. ಆದ ಕಾರಣ ಯುವ ಜನತ ಎಚ್ಚೆತ್ತುಕೊಂಡು ದುಶ್ಚಟಗಳಿಂದ ಮುಕ್ತರಾಗಲು ಸಲಹೆ ನೀಡಿದರು.
ಪ್ರಾಂಶುಪಾಲರಾದ ಎಂ.ಡಿ.ಶಿವಕುಮಾರ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ಅರಿತು ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಿಸಲು ಕೈ ಜೋಡಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಕುಟುಂಬದ ಸದಸ್ಯರಿಗೆ ಇಂತಹ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಮುಕ್ತ ಕರ್ನಾಟಕ ನಿರ್ಮಿಸಬೇಕೆಂದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಷಡಕ್ಷರಿಯವರು ಪ್ರತಿಜ್ಞಾವಿಧಿ ಬೋಧಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಮಾಲೋಚಕರಾದ ರವಿ ಪ್ರಕಾಶ್ ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


