ತುಮಕೂರು: ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಒಂದು ಸಾವಿರ ಜನ ಆಟೋ, ಆಂಬುಲೆನ್ಸ್ ಹಾಗೂ ಟ್ಯಾಕ್ಸಿ ಚಾಲಕರಿಗೆ ಉಚಿತವಾಗಿ 10 ಲಕ್ಷ ರೂ. ಮೌಲ್ಯದ ಅಪಘಾತ ವಿಮಾ ಸೌಲಭ್ಯ ನೀಡಲಾಗುತ್ತಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಕ್ಷಿತ್ ಕರಿಮಣ್ಣೆ ತಿಳಿಸಿದ್ದಾರೆ.
ನ.30ರಂದು ನಗರದ ಭದ್ರಮ್ಮ ವೃತ್ತದಲ್ಲಿ ಬೆಳಿಗ್ಗೆ 10:30ಕ್ಕೆ ಜನಸೈನ್ಯದಿಂದ ಕನ್ನಡ ರಾಜ್ಯೋತ್ಸವ ಏರ್ಪಡಿಸಲಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು, ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಕನ್ನಡ ಧ್ವಜಾರೋಹಣ ನೆರವೇರಿಸುವರು. ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಎರಿಸ್ವಾಮಿ ಅಧ್ಯಕ್ಷತೆವಹಿಸುವರು ಎಂದು ಹೇಳಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಎನ್.ಗೋವಿಂದರಾಜು, ಮುರಳಿಧರ ಹಾಲಪ್ಪ, ಇಟ್ಬಾಲ್ ಅಹ್ಮದ್, ನಗರಪಾಲಿಕೆ ಆಯುಕ್ತ ಅಶ್ವಿಜ, ಎಸ್ಪಿಕೆ.ವಿ.ಅಶೋಕ್, ಡಿವೈಎಸ್ ಪಿ ಚಂದ್ರಶೇಖರ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


