ಸರಗೂರು: ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್ ಬಿಐ ಬ್ಯಾಂಕ್ ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ ಸಂಘಟನೆಗಳು ಅಂಚೆ ಇಲಾಖೆ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.
ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಖಾತೆದಾರರ ಹಣವನ್ನು ಲೂಟಿ ಮಾಡಿರುವ ವ್ಯಕ್ತಿ ಯಾವುದೇ ಕ್ರಮ ಕೈಗೊಳ್ಳದೇ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಇಲಾಖೆ ತನಿಖಾಧಿಕಾರಿಗಳು, ಆರು ತಿಂಗಳು ಕಳೆದರೂ ಇವರ ಮೇಲೆ ದೂರು ದಾಖಲಿಸಿಲ್ಲ, ಇವರು ಅಂಚೆ ಇಲಾಖೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ದೂರಿದರು.
ಖಾತೆದಾರಿಗೆ ಹಣವನ್ನು ವರ್ಗಾವಣೆ ಮಾಡಿಲ್ಲ ಎಂದಾದರೆ ಪಟ್ಟಣವನ್ನು ಬಂದ್ ಮಾಡಿಸಿ ನಂತರ ಅಂಚೆ ಕಚೇರಿಗೆ ಬೀಗ ಜಡಿದು ಮುತ್ತಿಗೆ ಹಾಕುವ ಮೂಲಕ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು. ಖಾತೆದಾರರು ಎಲ್ಲಾ ವಯಸ್ಸಾದವರಿಗೆ ಏನಾದರೂ ಸಮಸ್ಯೆಯಾದರೆ ಅಂಚೆ ಇಲಾಖೆ ಅಧಿಕಾರಿಗಳೇ ನೇರ ಹೊಣೆ ಎಂದು ಕಿಡಿಕಾರಿದ್ದರು.
ವಯಸ್ಸಾರು ತಮ್ಮ ಜೀವನಕ್ಕೆ ಇಟ್ಟುಕೊಂಡಿದ್ದ ಹಣವನ್ನು ಅಂಚೆ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿ ದೀಪಕ್ ರವರು ನಕಲಿ ಸಹಿ ಮಾಡಿಕೊಂಡು ವರ್ಗಾವಣೆ ಮಾಡಿಕೊಂಡಿದ್ದರಿಂದ ಅಂಚೆ ಇಲಾಖೆ ಮೇಲೆ ನಂಬಿಕೆ ಇಲ್ಲದಂತೆಯಾಗಿದೆ ಎಂದು ಖಾತೆದಾರರ ಪರವಾಗಿ ಅಳಲು ತೋಡಿಕೊಂಡರು.
ಆದಿಕರ್ನಾಟಕ ಮಹಾಸಭಾ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಅಂಚೆ ಕಚೇರಿಯ ಉಳಿತಾಯ ಖಾತೆಯಿಂದ ಹಣ ಹಿಂಪಾವತಿಯ ಮೇಲೆ ಖಾತೆದಾರರ ನಕಲಿ ಸಹಿ ಮಾಡಿ ಹಣ ಪಡೆದಿದ್ದಾರೆ, ಖಾತೆದಾರರು ಹಾಗೂ ಪ್ರಗತಿಪರ ಸಂಘಟನೆಗಳು ಮುಖಂಡರು ನಮಗೆ ಇನ್ನೂ ಒಂದು ತಿಂಗಳು ಒಳಗೆ ನಮ್ಮ ಹಣವನ್ನು ಖಾತೆಗೆ ಜಮಾ ಮಾಡಿಲ್ಲ ಎಂದಾದರೆ, ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ಜಿಲ್ಲಾ ಅಂಚೆ ಇಲಾಖೆ ಅಧಿಕಾರಿಗಳಾದ ಶ್ರೀನಿವಾಸ.ಚೇತನ್ ರವರು ಪ್ರತಿಭಟನೆ ನಡೆಯುತ್ತಿದ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸರಗೂರಿನಲ್ಲಿ ನಡೆದ ಘಟನೆದಿಂದ ನಾವು ಎಲ್ಲಾ ಗ್ರಾಹಕರ ಮುಂದೆ ತನಿಖೆ ನಡೆಸಿದ್ದೇವೆ. ನಾವುಗಳು ಎರಡು ತಿಂಗಳ ಕಾಲ ಖಾತೆದಾರರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಅದರಂತೆ ಕಚೇರಿಯಲ್ಲಿ 32 ಸಾವಿರ ಖಾತೆದಾರರು ಇದ್ದಾರೆ. ಅದರಲ್ಲಿ 75 ಖಾತೆದಾರರ ಹಣವನ್ನು ಲೂಟಿ ಮಾಡಿರುವ ಕಂಡು ಬಂದಿದೆ. ಅದನ್ನು ಕೇಂದ್ರ ಇಲಾಖೆ ಗಮನಕ್ಕೆ ತರಲಾಗಿದೆ.ಸಿಬಿಐ ಇಲಾಖೆ ದೂರು ನೀಡಿದ್ದೇವೆ.ಅವರು ಬಂದು ತನಿಖೆ ಮುಂದಾಗುತ್ತಾರೆ. ಈಗಾಗಲೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.
ಸರಗೂರಿನಲ್ಲಿ ನಡೆದ ಘಟನೆಯ ಬಗ್ಗೆ ನಾಳೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಭೆ ಮಾಡುತ್ತಿದ್ದಾರೆ. ಇದರ ಬಗ್ಗೆ ಮಾತನಾಡಿ ನಿಮ್ಮ ಹಣವನ್ನು ಖಾತೆಗೆ ಜಮಾ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪ್ರತಿಭಟನಾಕಾರು ನಿಮ್ಮ ಬಗ್ಗೆ ಯಾವುದೇ ನಂಬಿಕೆ ಇಲ್ಲ. ಖಾತೆಗೆ ಜಮಾ ಮಾಡುವವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ಪಟ್ಟು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಈ ಸಂದರ್ಭದಲ್ಲಿ ಚನ್ನಿಪುರ ಮಲ್ಲೇಶ್, ಗ್ರಾಮೀಣ ಮಹೇಶ್, ಲಂಕೆ ಲಕ್ಷಣ್, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಪ್ರತಿಭಟನೆಯಲ್ಲಿ ಖಾತೆದಾರರಾದ ಮುಳ್ಳೂರು ಲೋಕೇಶ್, ಎಸ್.ಆರ್.ಮಹೇಶ್, ನಿವೃತ್ತ ಶಿಕ್ಷಕ ಶಾಂಭವಮೂರ್ತಿ, ಮಹದೇವಪ್ಪ, ಪೋಸ್ಟ್ ದಾಸೇಗೌಡ,ನಿತಿನ್, ಶಾಂತಣ್ಣ, ಸರಗೂರು ಲೋಕೇಶ್, ಸುಂದರಮ್ಮ, ರಾಜೇಶ್, ಸಿ. ನಾಗರಾಜ್, ಸಿ. ಚೌಡಶೆಟ್ಟಿ, ವೆಂಕಟೇಶ್, ಅನಂತ ಶಯನ, ಸುಧಾ, ಜಯಮ್ಮ, ಸರೋಜಮ್ಮ, ಜಿ.ಬಿ.ಶಶಿಕಲಾ, ಜಗದೀಶ್, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಣ ಕಳೆದು ಕೊಂಡ ನೊಂದ ಗ್ರಾಹಕರುಗಳು ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


