ಸರಗೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಆಚರಿಸಲಾಯಿತು.
ನಂತರ ಮಾತನಾಡಿದ ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ, ಧರ್ಮಸ್ಥಳದ ಧರ್ಮಾಧಿಕಾರಿಗಳು ನಾಡಿನ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಅತ್ಯಂತ ಕಷ್ಟಕರವಾಗಿ ಜೀವಿಸಿರುವ ಜನರಿಗೆ ಆಶ್ರಯ ನೀಡುವುದು ಪ್ರಾಣಿ ಪಕ್ಷಿ ಪಶು ಸಂಕುಲಕ್ಕೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಕೆರೆ ಹೂಳೆತ್ತುವ ಕೆಲಸ ಪರಿಸರ ಸಂರಕ್ಷಣಾಗಾಗಿ ಶಾಲಾ–ಕಾಲೇಜುಗಳಲ್ಲಿ ಗಿಡ ನೀಡುವ ಕಾರ್ಯಕ್ರಮಗಳು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮನೆ ಇಲ್ಲದೆ ಬಳಲುತ್ತಿರುವ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದರು.
ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಜೊತೆಯಲ್ಲಿ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ ಬ್ಯಾಂಕುಗಳಿಂದ ವಿಶೇಷವಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ದಾಖಲಾತಿ ಇಲ್ಲದೆ ಸುಲಭ ಸಾಲ ಸೌಲಭ್ಯಗಳನ್ನು ಒದಗಿಸಿದ್ದಾರೆ.
ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಗಳನ್ನು ನೀಡುವ ಹಲವಾರು ಯೋಜನೆಗಳನ್ನು ತಂದ ಪೂಜ್ಯ ವೀರೇಂದ್ರ ಹೆಗಡೆಯವರಿಗೆ ಇಂದು ನಾವು ಶುಭವನ್ನು ಹಾರೈಸೋಣ ಅವರಿಗೆ ದೇವರು ಇನ್ನಷ್ಟು ಇಂಥ ಸೇವೆಯನ್ನು ಮಾಡುವ ಶಕ್ತಿ ಆರೋಗ್ಯ ಆಯಸ್ಸನ್ನು ಕರುಣಿಸಲಿ ಎಂದು ತಿಳಿಸಿದರು.
ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಶಿವರುದ್ರಪ್ಪನವರು ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ನಾಗರಾಜ್ , ಜನಪ್ರತಿನಿಧಿಗಳು ಸಂಘದ ಸದಸ್ಯರು ವಲಯದ ಸೇವಾ ಪ್ರತಿನಿಧಿಗಳು ವಿಎಲ್ ಇ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


