ಪಾವಗಡ: ತುಮಕೂರು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಕಳೆದ ಎಂಟು ತಿಂಗಳಿಂದ ವೇತನ ಸಿಕ್ಕಿಲ್ಲ ಹೀಗಾಗಿ ನೌಕರರ ಕುಟುಂಬಗಳ ನಿರ್ವಹಣೆ ಕಷ್ಟಕರವಾಗಿದೆ ಎಂದು ನೌಕರರು ಅಲವತ್ತುಕೊಂಡಿದ್ದಾರೆ.
ತುಮಕೂರು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಂಭತ್ತು ನೌಕರರ ವೇತನ ನೀಡಿಲ್ಲ ಬೇರೆ ಇಲಾಖೆಗಳಲ್ಲಿ ದಿನಗೂಲಿ ನೌಕರರ ವೇತನ ನೀಡುತ್ತಿದ್ದಾರೆ. ಆದರೆ ಈ ಕಚೇರಿಯಲ್ಲಿ ಮಾತ್ರ ವೇತನ ನೀಡದೆ ತಡೆ ಹಿಡಿದಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ನಮ್ಮ ಎಂಟು ತಿಂಗಳ ವೇತನ ನೀಡಬೇಕು. ನಮ್ಮ ಜೀವನ ತುಂಬಾ ಕಷ್ಟಕರವಾಗಿದೆ. ತಕ್ಷಣವೇ ವೇತನ ಬಿಡುಗಡೆಗೊಳಿಸಿ ನಮ್ಮ ಜೀವನಮಟ್ಟ ಸುಧಾರಿಸಬೇಕೆಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


