ಬೀದರ್: ಹೈದರಾಬಾದ್ ನಿಂದ ಮಹಾರಾಷ್ಟ್ರದ ಕಡೆಗೆ ಟಾಟಾ ಗೂಡ್ಸ್ ವಾಹನವೊಂದರಲ್ಲಿ 6 ಕೋಟಿ 50ಲಕ್ಷ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿರುವಾಗ ದಾಳಿ ನಡೆಸಿದ ಪೊಲೀಸರು, ಗಾಂಜಾ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೀದರ್ ರಾಷ್ಟ್ರೀಯ ಹೆದ್ದಾರಿ–65ರ ರಾಜೇಶ್ವರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಗಾಂಜಾ ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹುಮನಾಬಾದ ಉಪ ವಿಭಾಗದ ಸಿಪಿಐ ಮಾಡೋಳಪ್ಪ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ. ಟಾಟಾ ಗೂಡ್ಸ್ ವಾಹನದಲ್ಲಿ ಗಾಂಜಾ ಇದ್ದ ಮೂಟೆಗಳನ್ನಿಟ್ಟು ಅದರ ಮೇಲೆ ಮೊಟ್ಟೆಗಳನ್ನು ಇಡಲಾಗಿತ್ತು. ದಾಳಿ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಟಾ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 6 ಕೋಟಿ 50 ಲಕ್ಷ ರೂ. ಮೌಲ್ಯದ 650 ಕೆ.ಜಿ. ತೂಕದ ಗಾಂಜಾ ದೊರಕಿದೆ. ಚಾಲಕನನ್ನು ವಿಚಾರಿಸಿದಾಗ ಹೈದರಾಬಾದ್‌ನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸ್ ಪಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


