ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ಭಗತ್ ಸಿಂಗ್ ಆಟೋ ನಿಲ್ದಾಣದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿಗೆ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸ್ಥಳೀಯ ನಾಗರಿಕರು ಹಾಗೂ ಆಟೋ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ರಮೇಶ್, ಗಂಗಾಧರ್, ಚಂದ್ರಣ್ಣ, ಗೋಪಾಲ್ ಕೃಷ್ಣ, ರಂಗೇ ಗೌಡ ಸೇರಿದಂತೆ ಅನೇಕರು ಹಾಜರಿದ್ದು, ಕನ್ನಡ ನಾಡಿನ ಗೌರವ ಸಂಸ್ಕೃತಿಯನ್ನು ಕಾಪಾಡಿ ಬೆಳೆಸುವ ಸಂಕಲ್ಪ ವ್ಯಕ್ತಪಡಿಸಿದರು.
ಸಪ್ತಗಿರಿ ಬಡಾವಣೆಯ ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ನಡೆದ ಈ ರಾಜ್ಯೋತ್ಸವ ಸಂಭ್ರಮವು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಯಿತು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


