ತುಮಕೂರು: ವಿದ್ಯೋದಯ ಕಾನೂನು ಕಾಲೇಜು ಎನ್ ಎಸ್ ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರದಲ್ಲಿ ದುರ್ಗದ ಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಆಶಾ ಕೆ.ಎಸ್. ವಕೀಲರು ಹಾಗೂ ಮಾಜಿ ಬಾಲ ನ್ಯಾಯ ಮಂಡಳಿ ಸದಸ್ಯರು ಮತ್ತು ಮಾಜಿ ಸರ್ಕಾರಿ ವಿಶೇಷ ಅಭಿಯೋಜಕರು ಇವರು ಗ್ರಾಮಸ್ಥರಿಗೆ ಹಾಗೂ ಶಿಬಿರಾರ್ಥಿಗಳಿಗೆ ಕಾನೂನು ಅರಿವನ್ನು ವಿವಿಧ ನ್ಯಾಯಾಲಯದ ತೀರ್ಪುಗಳು ಹಾಗೂ ಅಪರಾಧಗಳ ಉದಾಹರಣೆಯೊಂದಿಗೆ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವರಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಯಾರಿಗೆ ಉಚಿತವಾಗಿ ಕಾನೂನು ನೆರವು ಸಿಗುತ್ತದೆ ಎಂಬುದನ್ನು ತಿಳಿಸಿದರು ಹಾಗೂ ಈ ಒಂದು ಉಚಿತ ಕಾನೂನು ಸೇವೆಯನ್ನು ಕಾನೂನುಗಳ ಕುರಿತು ಪಡೆಯಲು ಇರಬೇಕಾದ ಮಾನದಂಡಗಳ ಕುರಿತು ಜನಸಾಮಾನ್ಯರಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಕಾನೂನು ಸೇವಾ ಕೋಶದ ಸಂಚಾಲಕರಾದ ರಶ್ಮಿ, ಕಾನೂನು ಕಾಲೇಜಿನ ಪ್ರಾಧ್ಯಾಪಕರುಗಳಾದ ಸಹಾಯಕ ರಮೇಶ, ಮಂಜುನಾಥ, ಬಾಲಕೃಷ್ಣ, ಗ್ರಂಥಾಲಯ ಸಿಬ್ಬಂದಿ ಸುರೇಶಯ್ಯ, ದುರ್ಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಊರಿನ ಮುಖಂಡರು, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಕಿಶೋರ್ ವಿ, ಪುಷ್ಪ ಕೆ ಎಸ್, ರೂಪ ಕೆ.ವಿ., ಡಾ.ಮುದ್ದು ರಾಜು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


