ಸರಗೂರು: ನನ್ನ ಅಧಿಕಾರದ ಅವಧಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರ ಸಹಕಾರ ಸ್ಮರಣೀಯ. ಸರಕಾರದಿಂದ ಬಿಡುಗಡೆಯಾದ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಡೆಗೆ ಮುಂದುವರಿಯುತ್ತೇನೆ ಎಂದು ನೂತನ ಪ.ಪಂ. ಅಧ್ಯಕ್ಷೆ ಚೈತ್ರ ಸ್ವಾಮಿ ತಿಳಿಸಿದರು.
ಸೋಮವಾರದಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೊಠಡಿಗೆ ಪೂಜೆ ಸಲ್ಲಿಸಿ ನಂತರ ಅಧಿಕಾರವನ್ನು ವಹಿಸಿಕೊಂಡರು ಮಾತನಾಡಿದರು.
ನನ್ನ ಅಧಿಕಾರದ ಅವಧಿಯಲ್ಲಿ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಹಾಗೂ ಅಧಿಕಾರಿ ವೃಂದವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣವನ್ನು ಮಾದರಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಪಟ್ಟಣವನ್ನು ಅಭಿವೃದ್ಧಿ ಕಡೆಗೆ ಹೋಗಲು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಹಾಗೂ ತಾಲ್ಲೂಕಿನ ಅಭಿವೃದ್ಧಿಕಾರ ಶಾಸಕ ಅನಿಲ್ ಚಿಕ್ಕಮಾದುರವರ ಜೊತೆಗೂಡಿ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಕೈಜೊಡಿಸಿಕೊಂಡು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ, ಸಣ್ಣ ತಾಯಮ್ಮ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಮುಖಂಡರಾದ ರಂಗನಾಥ, ಮಕ್ ಪಿರುಲ್ಲಾ, ಆರ್ಯ ಮಹೇಶ್, ಮಹದೇವ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


