ಗುಬ್ಬಿ: ದನ ಮೇಯಿಸಲು ಹೋಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿ.ಎಸ್.ಪುರ ಹೋಬಳಿ ಮಣಿಕುಪ್ಪೆ ನಿವಾಸಿ ನರಸಯ್ಯ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಡಿಕೆ ತೋಟದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಉಗಣಿ ಬಳ್ಳಿ, ಗಿಡಗಂಟೆಗಳು ಹಬ್ಬಿದ್ದು, ಇದರಿಂದಾಗಿ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆನ್ನಲಾಗಿದೆ.
ಹಸುಗಳು ಮಾತ್ರವೇ ಮನೆಗೆ ಬಂದ ವೇಳೆ ಮನೆಯವರು ಅನುಮಾನಗೊಂಡು ಹುಡುಕಾಟ ನಡೆಸಿದ್ದು, ಈ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತದೇಹ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಮಾಯಕ ವ್ಯಕ್ತಿ ಬಲಿಯಾಗಲು ಪ್ರಮುಖ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


