ತುಮಕೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು, ಬೋಧಕರು ಜನಸಾಮಾನ್ಯರಿಗೆ ಅನುಕರಣೀಯ ಆವಿಷ್ಕಾರ/ನಾವೀನ್ಯತೆಯ ಪುರಸ್ಕಾರ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ, ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳು/ಪರಿಹಾರಗಳನ್ನು ಪ್ರತಿ ವರ್ಷ ಗುರುತಿಸಿ ಈ ಪುರಸ್ಕಾರ ನೀಡಲಾಗುವುದು. ಪುರಸ್ಕಾರವು 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.
ಸ್ನಾತಕೋತ್ತರ ವಿದ್ಯಾರ್ಥಿಗಳು ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಯು.ಆರ್. ರಾವ್, ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಡಾ.ಎಸ್.ಕೆ. ಶಿವಕುಮಾರ್ ಹಾಗೂ ಬೋಧಕರು ಹಾಗೂ ಜನಸಾಮಾನ್ಯರ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಎಸ್.ಅಯ್ಯಪ್ಪನ್ ಪುರಸ್ಕಾರ ನೀಡಲಾಗುವುದು, ಆಸಕ್ತರು ಡಿಸೆಂಬರ್ 31ರೊಳಗಾಗಿ ಅಕಾಡೆಮಿಯ ವೆಬ್ ಸೈಟ್ https://kstacademy.in ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080–29721550 ಅಥವಾ ಮೊ.ಸಂ: 9620767819/ 9686449019ನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಆರ್. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


