ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಿರುವ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಖಾಲಿಯಿರುವ 1 ನೇತ್ರ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಡಿಸೆಂಬರ್ 9ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ನೇರ ಸಂದರ್ಶನವು ಡಿಸೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಮಾನಿಕೆರೆ ಎದುರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು 2 ವರ್ಷದ Diploma in Ophthalmic ಅಥವಾ ನೇತ್ರ ಸಹಾಯಕರಾಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್ ಪಿಸಿಐಬಿ ನಿಯಮಾನುಸಾರ ತರಬೇತಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಇಂಟರ್ ನೆಟ್ ಇತ್ಯಾದಿ ಬಳಕೆಗೆ ಬೇಕಾಗುವ ಕಂಪ್ಯೂಟರ್ ಬೇಸಿಕ್ ಕೋರ್ಸ್‌ನಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
ಸಂದರ್ಶನಕ್ಕೆ ಗರಿಷ್ಠ 45 ವರ್ಷದ ಅಭ್ಯರ್ಥಿಗಳು ಮೂಲ ದಾಖಲೆ ಹಾಗೂ 2 ಸ್ವಯಂ ದೃಢೀಕೃತ ಪ್ರತಿ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


