ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಪಾವಗಡ, ಸಹಸ್ರ ಬಿಲ್ವಾರ್ಚನ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ರೊಪ್ಪ ಮತ್ತು ಕಸಬಾ ವಲಯದಲ್ಲಿ ನಡೆದ ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಹೆಚ್.ವಿ.ವೆಂಕಟೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯಿಂದ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾಕ್ಟರ್ ಜಪಾನಂದ ಮಹಾರಾಜ್ ಸ್ವಾಮೀಜಿ, ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿತ್ವದ ಯೋಜನೆಯು ರಾಜ್ಯದಾದ್ಯಂತ ಗ್ರಾಮಗಳ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ಎಚ್. ಮಾತನಾಡಿ, ಧರ್ಮಸ್ಥಳ ಯೋಜನೆಯ ಮೂಲಕ ಪಾವಗಡ ತಾಲೂಕಿನಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ, 20 ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ವದಗಣೆ, 07 ಕೆರೆಗಳ ಅಭಿವೃದ್ಧಿ, 3100 ಸಂಘಗಳ ರಚನೆ ಮೂಲಕ 32 ಸಾವಿರ ಜನರಿಗೆ ಬೇರೆ ಬೇರೆ ಉದ್ದೇಶಗಳಿಗೆ ಆರ್ಥಿಕ ನೆರವು, ಹೀಗೆ ನೂರಾರು ಕಾರ್ಯಕ್ರಮಗಳ ಮೂಲಕ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಗ್ಗೆ ತಿಳಿಸಿದರು.
ಪುರಸಭೆಯ ಮಾಜಿ ಅಧ್ಯಕ್ಷ ಸುದೇಶ್ ಬಾಬು ಮಾತನಾಡಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾ ಅಧ್ಯಕ್ಷರಾದ ಪೂಜಾರಪ್ಪ, ರೈತ ಸಂಘದ ಪಾವಗಡ ತಾಲೂಕ ಅಧ್ಯಕ್ಷರಾದ ಜಿ.ನರಸಿಂಹ ರೆಡ್ಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ ಜಿ.ಡಿ., ಎಸ್ ಎಸ್ ಕೆ, ಭತ್ತಿನೆನಿ ನಾಗೇಂದ್ರರಾವ್ (ನಾನಿ), ಸಮಾಜ ಸೇವಕರು, ರಾಜಗೋಪಾಲ ಶೆಟ್ಟಿ, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರು, ಹಾಗೂ ಸಹಸ್ರ ಸಂಖ್ಯೆಯ ಸ್ವಸಹಾಯ ಸಂಘದ ಸದಸ್ಯರು, ಯೋಜನೆಯ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


