ಬೀದರ್: ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬೇರಾಳ ಬಿಳಿ ಭಾಲ್ಕಿ ಸಾರಿಗೆ ಘಟಕದ ಬಸ್ ಹಾಳಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಬಸ್ ಇಲ್ಲದೇ ಪರದಾಡಿದ ಘಟನೆ ಬುಧವಾರ ನಡೆದಿದೆ.,
ಭಾಲ್ಕಿ ಘಟಕದಿಂದ ಔರಾದ್ ತಾಲೂಕು ಘಟಕದ ಸಾರಿಗೆ ಬಸ್ಸು ನಿನ್ನೆ ಹಾಳಾಗಿದ್ದು, ಇಂದು ಮುಂಜಾನೆ ಕೂಡ ಬಂದಿಲ್ಲ, ಹಾಗಾಗಿ ವಿದ್ಯಾರ್ಥಿಗಳು ಪರದಾಡಿದ್ದಾರೆ.
ಶಾಲಾ ಕಾಲೇಜಿಗೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ತೊಂದರೆಗೀಡಾದರು. ನಿನ್ನೆ ಹಾಳಾದ ಬಸ್ಸು ಇಂದು ಬೆಳಿಗ್ಗೆ ಕೂಡ ಬಸ್ ಬಂದಿಲ್ಲ. ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಯ್ತು.
ಭಾಲ್ಕಿ ಘಟಕದಿಂದ ಔರಾದ್ ಘಟಕ ತಲುಪಲು ಸುಮಾರು ಒಂದು ತಾಸು ಬೇಕು. ಆದರೆ ಬಸ್ ಗಳ ಕೊರತೆಯಿಂದ ವಿದ್ಯಾರ್ಥಿಗಳು ಗಂಟೆಗಟ್ಟಲೆ ತಡವಾಗಿ ಶಾಲಾ—ಕಾಲೇಜುಗಳಿಗೆ ತಲುಪುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ತಕ್ಷಣವೇ ಬಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ಸಂಬಂಧ ಕೆಎಸ್ ಆರ್ ಟಿಸಿ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರು ಗಮನ ಹರಿಸಿ, ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


