ಬೆಂಗಳೂರು: ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಶುಕ್ರವಾರ ಬೆಳಗ್ಗೆ ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್ ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಟ್ರ‍್ಯಾಕ್ ಮೇಲಿದ್ದ ಶವವನ್ನು ತೆರವುಗೊಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


