ಕೊರಟಗೆರೆ: ತಾಲ್ಲೂಕಿನ ಹಂಚಿಹಳ್ಳಿ ಗ್ರಾಮ ಪಂಚಾಯಿತಿಗೆ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದರು.
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಬಳಿಕ ಗ್ರಾ.ಪಂ ಅಧ್ಯಕ್ಷ ಎಂ.ಎಸ್.ಭೀಮರಾಜು ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳ ಸದಸ್ಯರುಗಳನ್ನು ವಿಶ್ವಾಸಕ್ಕೆ ಪಡೆದು ಪ್ರತೀ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಜೊತೆಗೆ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿ ಶುದ್ದ ಕುಡಿಯುವ ನೀರನ್ನು ಒದಗಿಸಿದ್ದೇವೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಇದರಿಂದಾಗಿ ಇಂದು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಲು ಕಾರಣವಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲ ಸದಸ್ಯರು ಮತ್ತು ಅಧಿಕಾರಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಮಾತನಾಡಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳ ಅಭಿವೃದ್ಧಿ ಮತ್ತು ಆಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕಾರಣದಿಂದ ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಿದೆ. ಈ ಬಾರಿ ಹಂಚಿಹಳ್ಳಿ ಗ್ರಾ.ಪಂ.ಗೆ ಪ್ರಶಸ್ತಿ ಲಭಿಸಿರುವುದು ಸಂತಸದ ವಿಚಾರವಾಗಿದೆ. ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಲು ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾ.ಪಂ. ಇಓ ರವರ ಪ್ರೋತ್ಸಾಹ ಹೆಚ್ಚಿನದು ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


