nammatumakuru

    Subscribe to Updates

    Get the latest creative news from FooBar about art, design and business.

    What's Hot

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    December 6, 2025

    ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ

    December 6, 2025
    Facebook Twitter Instagram
    ಟ್ರೆಂಡಿಂಗ್
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    • ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ
    • ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಜಾರಿ, ತೇಲಿ ಸಂಭ್ರಮಿಸಿದ ಶಾಸಕ ಬಿ.ಸುರೇಶ್‌ ಗೌಡ
    • ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    ಜಿಲ್ಲಾ ಸುದ್ದಿ December 6, 2025

    ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ

    By adminDecember 6, 2025No Comments2 Mins Read
    drbrambedkar

    ಸರಗೂರು: ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು.

    ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆವರಣದಲ್ಲಿ ಶನಿವಾರದಂದು ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನದಂದು  ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by
    Provided by

    ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು.

    ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.

    ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವಜನರು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

    ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ’ ಎಂದರು.

    ಡಾ.ಬಿ.ಆರ್. ಅಂಬೇಡ್ಕರ್ ವಿಶ್ವಕಂಡ ಮಹಾನ್‌ ಮಾನವತಾವಾದಿಯಾಗಿದ್ದಾರೆ. ಇವರನ್ನು ಒಂದೇ ಜಾತಿಯ ಚೌಕಟ್ಟಿನೊಳಗೆ ಬಂಧಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ತಿಳಿಸಿದರು.

    ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ಮಾತನಾಡಿದರು.

    ಈ ಸಂದರ್ಭದಲ್ಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನಕ್ಕೆ ನಿರ್ಮಾಣ ಮಾಡಲು ಕಂದಾಯ ಇಲಾಖೆಯಿಂದ ಜಾಗವನ್ನು ಗುರುತಿಸಿಕೊಂಡು ಬಿಡಗಲು ಗ್ರಾಮದ ಸರ್ವೆ ನಂ 6 ರಲ್ಲಿ 27 ಗುಂಟೆ ಜಾಗವನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

    ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಇಓ ಪ್ರೇಮ್ ಕುಮಾರ್, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಮಾಜಿ ಜಿ.ಪಂ. ಸದಸ್ಯ ಚಿಕ್ಕವೀರನಾಯಕ, ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು,ಶಂಭುಲಿಂಗನಾಯಕ,ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು,ಮಣಿಕಂಠ, ಗೇಟ್ 2 ತಹಶೀಲ್ದಾರ್ ಪರಶಿವಮೂರ್ತಿ, ಪಿಎಸ್ ಐ ಗೋಪಾಲ್, ಮುಖಂಡರು ಗ್ರಾಪಂ ಸದಸ್ಯ ನಂಜಯ್ಯ,ಬಿಲ್ಲಯ್ಯ, ಗ್ರಾಪಂ ಸದಸ್ಯ ರುದ್ರಯ್ಯ, ಸರಗೂರು ಕೃಷ್ಣ, ಹೂವಿನಕೊಳ ಮಹೇಂದ್ರ, ಸ್ವಾಮಿ, ಗೋವಿಂದ, ಅಣ್ಣಯ್ಯ ಸ್ವಾಮಿ, ಮಹೇಶ್,ದೇವರಾಜು, ಶಿವರಾಜು,ಶಿರಮ್ಮ, ಕಳಸೂರು ಬಸವರಾಜು, ಮುಳ್ಳೂರು ಲೋಕೇಶ್,ಸಮಾಜ ಕಲ್ಯಾಣ ಇಲಾಖೆ ಗುಣಧಾರ್, ಆಶಿಶ್ , ಮಹದೇವಸ್ವಾಮಿ,ಸಿಬ್ಬಂದಿ ವರ್ಗದವರು ಸುನೀಲ್, ಮನೋಹರ್,ಮುಜೀಬ್, ರವಿಚಂದ್ರನ್, ಶ್ರೀನಿವಾಸ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ambedkar Power AmbedkarLegacy Dalit Movement DrBRAmbedkar Indian Constitution Karnataka News MohanKumari Saraguru Tahsildar Social Justice
    admin
    • Website

    Related Posts

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ

    December 6, 2025

    ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ…

    ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    December 6, 2025

    ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ

    December 6, 2025

    ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.