ತುಮಕೂರು: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ. ನನಗೆ ಸಾಕು, ಇನ್ನೊಬ್ಬರಿಗೆ ಅವಕಾಶ ಕೊಡಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಯೇ ಎಂದು ವರದಿಗಾರರ ಪ್ರಶ್ನಿಸಿದಾಗ ಗರಂ ಆದ ರಾಜಣ್ಣ, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ. ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದರು.
ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್ ಗಳ ಕುರಿತು ವಿರೋಧ ಪಕ್ಷದ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ, ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತಾ ಮನವಿ ಮಾಡುತ್ತೇನೆ ಎಂದರು.
2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಘೋಷಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


