ಸರಗೂರು: ತಾಲೂಕಿನ ಬಂಕವಾಡಿ ಗ್ರಾಮದಲ್ಲಿ ಭಾನುವಾರ ಅಂಜನಿಪುತ್ರ ಹನುಮ ಜಯಂತಿಯನ್ನು ಶ್ರದ್ಧಾ–ಭಕ್ತಿ, ಸಡಗರದಿಂದ ಆಚರಿಸಲಾಯಿತು. ಹನುಮನ ಭಕ್ತರು ಜೈಕಾರ ಕೂಗುತ್ತಾ ಹನುಮನಿಗೆ ನಮಿಸಿದರು.
ಜಯಂತಿ ಅಂಗವಾಗಿ ಗ್ರಾಮದ ವೀರಾಂಜನೇಯಸ್ವಾಮಿ ದೇವಸ್ಥಾನವನ್ನು ತೊಳೆದು, ವಿವಿಧ ಹೂವುಗಳಿಂದ ಅಲಂಕಾರಗೊಳಿಸಿ, ವಿದ್ಯುತ್ ದೀಪದಿಂದ ಸಿಂಗರಿಸಿದ್ದರು. ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ದೇವಾಲಯದ ಮುಂಭಾಗದಲ್ಲಿ ಜಮಾಯಿಸಿದ್ದ ಹನುಮ ಭಕ್ತರು ಜಾತ್ರೆಯ ವಾತಾವರಣವನ್ನು ಸೃಷ್ಟಿಸಿದ್ದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.
ಬಿ.ಮಟಕರೆ ಗ್ರಾ.ಪಂ. ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ವೀರಾಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹನುಮ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಶ್ರೀರಾಮ್ ಶ್ರೀ ಮಾರುತಿ ಎಂದು ಘೋಷಣೆ ಕೂಗಿಕೊಂಡು ವಿಶೇಷ ಸಲ್ಲಿಸಿದರು. ನಂತರ ಹನುಮ ಜಯಂತ್ಯೋತ್ಸವ ಮೆರವಣಿಗೆಯು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂತು. ಬೆಳಗ್ಗೆಯಿಂದಲೇ ವಾಯುಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ–ಹವನದ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥದೊಂದಿಗೆ ನಾಡಿನ ಸಮೃದ್ಧಿಗೆ ದೇವರಲ್ಲಿ ಪ್ರಾರ್ಥಿಸಲಾಯಿತು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.
ವೀರಾಂಜನೇಯಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕೃತ ರಥೋತ್ಸವದಲ್ಲಿ ಕೂರಿಸಿ, ಊರಿನ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯ. ವೀರಗಾಸೆ, ಪೂಜಾ ಕುಣಿತ, ನಗಾರಿ, ಸತ್ತಿಗೆ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ನಡೆಸಲಾಯಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ರಾಕೇಶ್(ಸ್ಯಾಂಟಿ) ಅರ್ಪಿಸುವ ಶೃತಿಪ್ರಿಯಾ ಮೆಲೋಡಿಸ್ ಅವರಿಂದ ಆರ್ಕೇಸ್ಟ್ರಾ ನಡೆಸಲಾಯಿತು.
ಗುಡಿಗೌಡರಾದ ಬಿ.ಎಸ್.ಚಿಕ್ಕಸ್ವಾಮಿ, ಬಿ.ಎಂ.ಪದ್ಮರಾಜ್, ಎಂ.ಪಿ.ಸುರೇಶ್, ಟಗರುಪುರದ ಜ್ಞಾನ ಭಾರತಿ ಆಂಗ್ಲ ಮಾಧ್ಯಮಶಾಲೆಯ ರಾಕೇಶ್(ಸ್ಯಾಂಡಿ) ಸೇರಿದಂತೆ ಗ್ರಾಮಸ್ಥರು, ಜೈ ಶ್ರೀರಾಮ ಯುವಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಟಗರುಪುರದ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಹಾಗೂ ಸೇರ್ವಥದಾರ ರಾಕೇಶ್(ಸ್ಯಾಂಡಿ) ಮಾತನಾಡಿ, ನಮ್ಮ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ವಿಜೃಂಭಣೆಯಿಂದ ಹನುಮ ಜಯಂತ್ಯೋತ್ಸವಯನ್ನು ಮಾಡಬೇಕು ಎಂದು ತೀರ್ಮಾನ ಮಾಡಿಕೊಂಡಿದ್ದರಿಂದ ನಾನೇ ಸ್ವತಃ ಆಚರಣೆ ಎಲ್ಲಾ ಜವಾಬ್ಧಾರಿಯನ್ನು ತೆಗೆದುಕೊಂಡು ವಿವಿಧ ಕಲಾತಂಡಗಳು ಮತ್ತು ನಮ್ಮ ಗ್ರಾಮದ ಸಾರ್ವಜನಿಕರಿಗೆ ಹಾಗೂ ಯುವಕರಿಗೆ ಮನರಂಜನೆ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದ್ದೂರಿಯಾಗಿ ಆಚರಿಸಲಾಯಿತು ಎಂದು ತಿಳಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


