nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ
    ತುಮಕೂರು December 9, 2025

    ತುಮಕೂರು  | ಗುಲಗಂಜಿ ಹಳ್ಳಿಯ ಶಾಲೆ ಉಳಿಸಲು ಪೋಷಕರಿಂದ ಪ್ರತಿಭಟನೆ

    By adminDecember 9, 2025No Comments2 Mins Read
    protest

    ತುಮಕೂರು: ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಹಳ್ಳಿಯ ಜನರು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು.

    ಪ್ರತಿಭಟನೆಯನ್ನ ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಗುಬ್ಬಿ ವೀರಣ್ಣನವರು ಕಟ್ಟಿಸಿ ಬೆಳೆಸಿರುವ ಗುಲಗಂಜಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಸಮುದ್ರನಹಳ್ಳಿ ಮ್ಯಾಗ್ನೆಟ್ ಗೆ ವಿಲೀನ ಮಾಡಲು ಮುಂದಾಗಿದೆ ಈ ನಿರ್ಧಾರವು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಂದುವರೆದು, ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಸಹ ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ ಹೊರಡಿಸಿದ ಸುತ್ತೋಲೆಯಲ್ಲಿ KPS Magnet ಶಾಲೆಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಿದೆ. ಅಂತೆಯೇ, KPS ಶಾಲೆಯನ್ನಾಗಿ ಉನ್ನತೀಕರಿಸುತ್ತಿರುವ ಹಲವು ಶಾಲೆಗಳಿಗೆ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸಿಸಬೇಕು ಎಂಬ ಆದೇಶವನ್ನು ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಹಲವು ಶಾಲೆಗಳಿಗೆ ನೀಡಲಾಗಿದೆ. ಅಧಿವೇಶನದಲ್ಲಿ ಸಚಿವರೇ ಹೇಳಿದಂತೆ, ಗ್ರಾಮ ಪಂಚಾಯಿತಿಗೊಂದರಂತೆ KPS Magnet ಶಾಲೆಗಳನ್ನು ತೆರೆಯಲಾಗುತ್ತದೆ, ಅಂದರೆ ತಮ್ಮದೇ ಇಲಾಖೆಯ ಆದೇಶದಂತೆ ಸರ್ಕಾರ ಮುಂದುವರೆಯುತ್ತಿದೆ ಎಂದರು.

    ಈಗ ಮೂಡುವ ಪ್ರಶ್ನೆಯೆಂದರೆ, ಸರ್ಕಾರದ ಆದೇಶಗಳು ಹೇಳುವುದೇ ಒಂದು, ಮಂತ್ರಿಗಳ ಹೇಳಿಕೆ ಮತ್ತೊಂದು. ಜನ ಯಾವುದನ್ನು ನಂಬಬೇಕು? ಆದ್ದರಿಂದ, ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಶಯ ನಿಜವಾದಲ್ಲಿ, ಈ ಕೂಡಲೇ ರಾಜ್ಯ ಸರ್ಕಾರ ತನ್ನ ಅಕ್ಟೋಬರ್ 15ರ ಆದೇಶದಲ್ಲಿ ನಮೂದಿಸಿರುವ ವಿಲೀನದ ಅಂಶವನ್ನು ಹಿಂಪಡೆಯಲಿ ಜೊತೆಗೆ ವಿಲೀನದ ಹೆಸರಿನಲ್ಲಿ ಕಡಿಮೆ ದಾಖಲಾತಿಯ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು ಎಐಡಿಎಸ್ಓ  ಆಗ್ರಹಿಸುತ್ತದೆ ಎಂದು ಹೇಳಿದರು.

    ಈ ಶಾಲೆಯು ಗುಬ್ಬಿ ವೀರಣ್ಣನವರು ಕಟ್ಟಿಸಿ ಬೆಳೆಸಿರುವ ಶಾಲೆ, ಈ ಶಾಲೆಯಲ್ಲಿ ಓದಿದವರು ಇಂದು ಉನ್ನತ ಉದ್ಯೋಗಗಳಲ್ಲಿದ್ದಾರೆ. ಸರಿಯಾದ ರಸ್ತೆಯಿಲ್ಲದ ಸಮುದ್ರನಹಳ್ಳಿಗೆ ನಮ್ಮೂರಿನ ಚಿಕ್ಕ ಮಕ್ಕಳನ್ನ ಹೇಗೆ ಕಳಿಸಬೇಕೆಂದು ಪ್ರಶ್ನಿಸಿದರು, ಹಾಗೂ ನಮ್ಮೂರಿನ ಶಾಲೆ ನಮ್ಮ ಹೆಮ್ಮೆ ಅದನ್ನ ನಾವು ಎಂದಿಗೂ ಮುಚ್ಚಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಸರ್ಕಾರದ ಮ್ಯಾಗ್ನೆಟ್ ಯೋಜನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯ ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು. ಪ್ರತಿಭಟನೆಯಲ್ಲಿ  ಜಿಲ್ಲಾ ಪದಾಧಿಕಾರಿಗಳಾದ ಭರತ್, ಸಂದೀಪ್ ಮತ್ತು ಗ್ರಾಮದ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಪಾವಗಡ:  ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಶಾಸನ ನೀಡಲು ಹಣವಿಲ್ಲದ ಸ್ಥಿತಿಗೆ ತಲುಪಿದ್ದು, ಸಂಪೂರ್ಣ ದಿವಾಳಿ ಹಂತದಲ್ಲಿದೆ…

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.