ಬೆಂಗಳೂರು: ರಾಜ್ಯದಲ್ಲಿ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಎಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಆದರೆ ಕಾಂಗ್ರೆಸ್ ನಾಯಕರು ದ್ವೇಷ ರಾಜಕಾರಣ ಮಾಡುತ್ತಿರುವುದು ಖೇದಕರ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ, 2025ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಒಂದು ಕಡೆಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎನ್ನುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನೀಡಿದ ವರದಿಯನ್ನು ಉಲ್ಲೇಖಿಸಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸೋಮಣ್ಣ ಪ್ರತಿಕ್ರಿಯೆ ನೀಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ದೇಶಭಕ್ತರ ಸಮೂಹ. ದೇಶಸೇವೆಯನ್ನೇ ಧ್ಯೇಯವಾಗಿಸಿಕೊಂಡು ಸೇವೆ ಸಲ್ಲಿಸುತ್ತಿರುವ ಸಂಘದ ವಿರುದ್ಧ ಕಾಂಗ್ರೆಸ್ ನಾಯಕರು ದ್ವೇಷ ರಾಜಕಾರಣ ಮಾಡುತ್ತಿರುವುದು ಖೇದಕರ, ರಾಜ್ಯದಲ್ಲಿ, 2025ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ 518 ಸ್ಥಳಗಳಲ್ಲಿ ಆಯೋಜಿಸಲಾದ ಪಥಸಂಚಲನದಲ್ಲಿ ಒಂದು ಕಡೆಯೂ ಯಾವುದೇ ಅಹಿತಕರ ಘಟನೆ ನಡೆಯದಿರುವುದನ್ನು ಸ್ವತಃ ರಾಜ್ಯದ ಗೃಹ ಸಚಿವರೇ ಉಲ್ಲೇಖಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
RSS ವಿರುದ್ಧ ಸದಾ ವಿಷಕಾರುವ, ಪಥಸಂಚಲನದಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ ಎಂದು ಅಪಪ್ರಚಾರ ಮಾಡುವ ಪ್ರಿಯಾಂಕ್ ಖರ್ಗೆಯವರೇ, ನಿಮ್ಮ ಸರ್ಕಾರದ ಮಾನ್ಯ ಗೃಹ ಸಚಿವರೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿರುವ ವರದಿಯನ್ನು ಓದಿ. ಇನ್ನಾದರೂ ನಿಮ್ಮ ನಿಲುವನ್ನು ಬದಲಿಸಿಕೊಳ್ಳಿ ಅಂತ ಹೇಳಿದ್ದಾರೆ.
ದೇಶ ಪ್ರೇಮ, ಶಿಸ್ತಿಗೆ ಹೆಸರಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ದೇಶಸೇವೆಯ ಕಾರ್ಯಗಳು ಯುವಪೀಳಿಗೆಗೆ ಮಾದರಿ ಎಂದು ಸೋಮಣ್ಣ ಹೊಗಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


