nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    ರಾಜ್ಯ ಸುದ್ದಿ December 11, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    By adminDecember 11, 2025No Comments2 Mins Read
    dr g parameshwar

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಅವರು ಉತ್ತರಿಸಿದರು.


    Provided by
    Provided by

    ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ ಎಂದರು.

    ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ. ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ–ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.

    ಮಾದಕ ದ್ರವ್ಯಗಳ ಅಕ್ರಮ ಸಾಗಾಟ ಮತ್ತು ಜಾಲದ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಟದ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ತಿಂಗಳು ಶಾಲಾ–ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ, ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

    ಸಂಶಯಾಸ್ಪದ ಹೈಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್‌ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರದ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ. ಪ್ರತಿ ಮಾಹೆಯಲ್ಲಿ ಜಿಲ್ಲಾಮಟ್ಟದ ಎನ್‌ಸಿಒಆರ್‌ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ, ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ…

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.