ತಿಪಟೂರು: ಪತ್ರ ಬರಹಗಾರರ ಉಳಿವಿನ ಬಗ್ಗೆ ಪತ್ರ ಬರಹಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ದಿನ ಲೇಖನ ಸಂದಿಗ್ಧತೆ ಚಳುವಳಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಪತ್ರ ಬರಹಗಾರರ ಒಕ್ಕೂಟದ ತಿಪಟೂರು ತಾಲೂಕು ಪತ್ರ ಬರಹಗಾರರ ಅಧ್ಯಕ್ಷ ಉಮೇಶ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಅಗ್ರಹಿಸಿ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಸಂಘವು ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾವೇರಿ ತಂತ್ರಾಂಶ ಒಂದು ಮತ್ತು ಎರಡರಲ್ಲಿ ಬದಲಾವಣೆ ಮಾಡಲು ಸರ್ಕಾರ ಹೊರಟಿದೆ, ಹೆಚ್ಚಿನ ಆಸ್ತಿ ವಿವರ ಬರೆಯಲು ಆಗುತ್ತಿಲ್ಲ. ಬೇರೆ ರಾಜ್ಯದಲ್ಲಿ ಇರುವಂತೆ ಪತ್ರ ಬರಹಗಾರರಿಗೂ ಲಾಗಿ ನೀಡಬೇಕು, ಈಗಾಗಲೇ ನಮಗೆ ಸಾಕಷ್ಟು ಅನುಭವವಿದ್ದು, ಪ್ರತಿ ವರ್ಷ ನವೀಕರಣ ಮಾಡಿಕೊಳ್ಳುತ್ತಿದ್ದೇವೆ. ಅನಧಿಕೃತ ಬರಹಗಾರರಿಗೆ ಕಡಿವಾಣ ಹಾಕಬೇಕು. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪತ್ರ ಬರಹಗಾರರಾದ ಮಹೇಶ್, ರಮೇಶ್, ಬಸವಯ್ಯ , ಮಂಜುಳಾ, ನಾಗೇಶ್ ಅನೇಕ ಬರಹಗಾರರು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


