ಸರಗೂರು: ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯವಾದದ್ದು ಎಂದು ಶಾಸಕರ ಪತ್ನಿ ಸೌಮ್ಯ ಚಿಕ್ಕಮಾದು ತಿಳಿಸಿದರು.
ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಗ್ರಾಮದಲ್ಲಿ ಶುಕ್ರವಾರದಂದು ಮಕ್ಕಳ ಜಾಗೃತಿ ಸಂಸ್ಥೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಬಡಗಲಪುರ ವೃತದ ಅಂಗನವಾಡಿ ಹಬ್ಬ ಕಾರ್ಯಕ್ರಮವನ್ನು ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಶಾಸಕರು ಬೆಳಗಾವಿ ಚಳಿಗಾಲದ ಅಧಿವೇಶನ ಇರುವುದರಿಂದ ಅವರು(ಶಾಸಕರು) ಬಾರದ ಕಾರಣ ಕಾರ್ಯಕ್ರಮ ನಿರೂಪಿಸಿ ನನ್ನನ್ನು ಸ್ವಾಗತಿಸಿದಕ್ಕೆ ಇಲಾಖೆಗೆ ಧನ್ಯವಾದಗಳು ತಿಳಿಸಿದರು.
ತಾಲೂಕಿನ ಅಂಗನವಾಡಿಗಳ ವೃತ್ತದಲ್ಲಿ ಸರ್ಕಾರದ ಪ್ರಕಾರ ಮಾಡಿಕೊಂಡು ಬರುತ್ತಿದ್ದು, ಶಾಸಕರು ಈ ಭಾಗದಲ್ಲಿ ಕಾಡಂಚಿನ ಭಾಗಕ್ಕೆ ಸಾಕಷ್ಟು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇನ್ನೂ ಹಂತ ಹಂತವಾಗಿ ಕೆಲಸ ಕಾರ್ಯಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ತಿಳಿಸಿದರು.
ಅಂಗನವಾಡಿಗಳಲ್ಲಿ ನಡೆಯುವ ಒಂದು ವಿಶೇಷ ಕಾರ್ಯಕ್ರಮವಾಗಿದ್ದು, ಇದರ ಮುಖ್ಯ ಉದ್ದೇಶ ಪೋಷಕರಿಗೆ ಮಕ್ಕಳ ಆರಂಭಿಕ ಕಲಿಕೆ, ಪೋಷಣೆ, ಆರೋಗ್ಯ ಮತ್ತು ಸಮುದಾಯದ ಭಾಗವಹಿಸುವಿಕೆಯ ಬಗ್ಗೆ ಅರಿವು ಮೂಡಿಸುವುದಾಗಿದೆ, ಅಂಗನವಾಡಿಗಳು ಕೇವಲ ಶಿಶುಪಾಲನಾ ಕೇಂದ್ರಗಳಲ್ಲ, ಬದಲಿಗೆ 3–6 ವರ್ಷದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣವನ್ನು ಒದಗಿಸುವ ಪ್ರಮುಖ ಕೇಂದ್ರಗಳಾಗಿವೆ ಎಂಬುದನ್ನು ಇದು ತೋರಿಸುತ್ತದೆ. ಈ ಹಬ್ಬದ ಮೂಲಕ ಪೋಷಕರಿಗೆ ತಮ್ಮ ಮಕ್ಕಳ ಕಲಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತದೆ ಮತ್ತು ಅಂಗನವಾಡಿ ಕೇಂದ್ರಗಳ ಮಹತ್ವವನ್ನು ಸಾರಲಾಗುತ್ತದೆ ಎಂದರು.
ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ, ಶಾಲಾ ಹಂತದಲ್ಲಿ ಮಕ್ಕಳಿಗೆ ಮಾತ್ರ ಸೀಮಿತವಾಗಿದ್ದು, ಮಕ್ಕಳ ಹಬ್ಬವನ್ನು ಅಂಗನವಾಡಿ ಹಬ್ಬವನ್ನಾಗಿ ಆಚರಣೆ ಮಾಡಲು ನಿರ್ಧರಿಸಿದಾಗ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಮುಖಂಡರು ಹಾಗೂ ಜಾಗೃತಿ ಸಂಸ್ಥೆಯವರು ಸಹಕಾರ ನೀಡಿದ್ದು. ಮಕ್ಕಳಿಗೆ ನಮ್ಮ ಸಂಪ್ರದಾಯ ಸಂಸ್ಕೃತಿಗಳನ್ನು ತಿಳಿಸಿಕೊಡುವ ಕಾರ್ಯ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಎಚ್.ಡಿ.ಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೀಪಾ ಮಾತನಾಡಿ, ಒಟ್ಟಾರೆ 200ಕ್ಕೂ ಹೆಚ್ಚು ಪೋಷಕರು, ಬಡಗಲಪುರ ವೃತ್ತದ ಶಿಕ್ಷಕಿಯರು ಹಾಗೂ ಸಹಾಯಕಿಯರು, ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅಂಗನವಾಡಿಯಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳನ್ನು ಪರಿಚಯ ಮಾಡಿಸುವುದರ ಮೂಲಕ ಪೋಷಕರು ಅಂಗನವಾಡಿ ಕಡೆ ತಿರುಗಿ ನೋಡುವಂತೆ ಮಾಡಲು ಮಕ್ಕಳ ಜಾಗೃತಿಗೆ ಸಾಕಷ್ಟು ಬೆಂಬಲವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಮುನ್ನ ಬಾಳೆ, ತಳಿರು, ತೋರಣ, ರಂಗವಲ್ಲಿಯಿಂದ ಹಬ್ಬದ ಸಂಭ್ರಮ ಕಳೆಕಟ್ಟಿತು. ದ್ವನಿವರ್ಧಕದ ಮೂಲಕ ಭಕ್ತಿ ಗೀತೆಗಳು ಹರಿದು ಬಂದವು. ಶಿಕ್ಷಕಿಯರು ಕುಣಿದು, ಕುಪ್ಪಳಿಸಿ ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದರು.
ಮಕ್ಕಳಲ್ಲಿ ಪ್ರಮುಖವಾಗಿ ಆಗುವ ದೈಹಿಕ, ಮಾತು ಮತ್ತು ಭಾಷೆ, ಬೌದ್ಧಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಗಳು, ಪೋಷಣೆ, ಪೋಷಕರಿಗೆ ಕ್ರಿಯಾತ್ಮಕ ಆಟಗಳ ಸ್ಟಾಲ್ ಗಳನ್ನು ಆಯೋಜಿಸಲಾಗಿತ್ತು. ಪ್ರತಿಯೊಂದು ಸ್ಟಾಲ್ ನಲ್ಲೂ ಮಕ್ಕಳ ಬೆಳವಣಿಗೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಪೋಸ್ಟರ್ ಗಳನ್ನೂ ಬಡಗಲಪುರ ವೃತ್ತದ ಶಿಕ್ಷಕಿಯರು, ಮಕ್ಕಳ ಜಾಗೃತಿ ಸಂಸ್ಥೆಯ ಸಂಯೋಜಕ ರೊಡಗೂಡಿ ಪೋಷಕರಿಗೆ ವಿವರಿಸಿದರು.
ಮತ್ತು ಮಕ್ಕಳಿಗೆ, ಪೋಷಕರಿಗೆ ಚಟುವಟಿಕೆಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಹಬ್ಬದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಅರಿಶಿಣ,ಕುಂಕುಮ, ಬಳೆ, ಹೂಗಳನ್ನು ನೀಡುವ ಮೂಲಕ ಎಲ್ಲರನ್ನು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಹಾದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ರಮೇಶ್, ಉಪಾಧ್ಯಕ್ಷ ಪ್ರಕಾಶ್, ಸದಸ್ಯರಾದ ಗಂಗಾಧರ, ರತ್ನಮ್ಮ, ಶಿವಲಿಂಗಯ್ಯ, ಶಿವರಾಜು, ಭಾಗ್ಯ ಕೆಂಪಸಿದ್ದ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು, ಶಿಶು ಅಭಿವೃದ್ಧಿ ಇಲಾಖೆಯ ದೀಪ, ಮೇಲ್ವಿಚಾರಕಿಯಾದ ರಜಿನಿ ಮಕ್ಕಳ ಅಭಿವೃದ್ಧಿ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಅಂಗನವಾಡಿಯ ಮೇಲ್ವಿಚಾರಕಿಯರು ಹಾಗೂ ಗ್ರಾಮಸ್ಥರು ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


