nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ-2025:  ಶಿಕ್ಷಕರಿಂದ 4 ತಂಡ ಮಕ್ಕಳಿಗೆ 15 ಆಟ..!
    ಕೊರಟಗೆರೆ December 15, 2025

    ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ-2025:  ಶಿಕ್ಷಕರಿಂದ 4 ತಂಡ ಮಕ್ಕಳಿಗೆ 15 ಆಟ..!

    By adminDecember 15, 2025No Comments2 Mins Read
    ragha

    ಕೊರಟಗೆರೆ : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್‌ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್‌ ಕುಮಾರ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು.

    ರಾಘವೇಂದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ, ಪುಡ್‌ ಪೇಸ್ಟ್, ಜಂಗಲ್ ಡೇ, ರಾಘಕ್ರೀಡೆಗೆ ಪ್ರಾಮುಖ್ಯತೆ ನೀಡಲಾಗಿದೆ. 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲೇ ಸಿಇಟಿ, ನೀಟ್ ಮತ್ತು ಜೆಇಇ ತರಬೇತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿದ್ದೇವೆ ಎಂದರು.

    ರಾಘವೇಂದ್ರ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲೆ ಆರ್.ಸಿ.ಜಿನ್ನಿ ಮಾತನಾಡಿ, ನಮ್ಮ ಶಾಲೆಯ ಎಲ್ಲಾ ಕಾರ್ಯಕ್ರಮಗಳಿಗೆ ಆಡಳಿತ ಮಂಡಳಿ ಸಹಕಾರ ನೀಡಿದೆ. ಕ್ರೀಡಾಕೂಟದಲ್ಲಿ ಪಾಲ್ಗೋಂಡ ಮಕ್ಕಳ ಆತ್ಮಸ್ಥೆರ್ಯ ಮತ್ತು ಸಡಗರ ಮುಗಿಲುಮುಟ್ಟಿದೆ. ರಾಘಕ್ರೀಡೆಯಲ್ಲಿ ವಿಜೇತರಾದ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದರು.

    ಕಾರ್ಯಕ್ರಮದಲ್ಲಿ ರಾಘವೇಂದ್ರ ಶಾಲೆಯ ವ್ಯವಸ್ಥಾಪಕ ರವಿಕುಮಾರ್, ಆಡಳಿತ ಸಂಯೋಜಕ ಕಾವ್ಯಶ್ರೀ.ಡಿ, ಉಪಪ್ರಾಂಶುಪಾಲೆ ಷಮೀನ ಖಾನಂ, ದೈಹಿಕ ಶಿಕ್ಷಕ ವೆಂಕಟೇಶ್, ನೂರಾರು ಜನ ಪೋಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

    ವಿದ್ಯಾರ್ಥಿಗಳ 4 ತಂಡ 15 ಆಟ:

    ವಿಶ್ವದ ಶ್ರೇಷ್ಟ ಹಾಕಿ ಆಟಗಾರ ಧ್ಯಾನ್‌ ಚಂದ್, ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್, ದಿನದಲಿತರ ಶಿಕ್ಷಣದ ಹೋರಾಟಗಾರ್ತಿ ಜ್ಯೋತಿಬಾಪುಲೆ ರಾಷ್ಟ್ರಪತಿ ಮತ್ತು ಕ್ಷಿಪಣಿ ಮನುಷ್ಯ ಅಬ್ದುಲ್ ಕಲಾಂ ಹೆಸರಿನ 4 ತಂಡ ಮಾಡಿ ವಿದ್ಯಾರ್ಥಿಗಳಿಗೆ 15 ಕ್ಕೂ ಅಧಿಕ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿತ್ತು. ಅತಿಹೆಚ್ಚು ಪದಕ ಪಡೆದ ಧ್ಯಾ ನ್‌ಚಂದ್ ತಂಡದ ವಿದ್ಯಾರ್ಥಿಗಳಿಗೆ ಸಾರಂಗ ಅಕಾಡೆಮಿಯ ಅಧ್ಯಕ್ಷ ಅಜಯ್‌ ಕುಮಾರ್ ಮತ್ತು ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ೧೫೦ಕ್ಕೂ ಅಧಿಕ ಮಕ್ಕಳಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಿದರು.

    ಮಕ್ಕಳ ಜೊತೆ ಪೋಷಕರಿಗೆ ಕ್ರೀಡೆ:

    ರಾಘವೇಂದ್ರ ಶಾಲೆಯ ಪ್ರೀ ನರ್ಸರಿ ಮಕ್ಕಳಿಗೆ ಮನರಂಜನಾ ಆಟ, 1ರಿಂದ 4ನೇ ತರಗತಿಯ ಮಕ್ಕಳಿಗೆ ಅಂಡರ್ ಚೇರ್, ಕಪ್ ಅಂಡ್ ಬಾಲ್, ಬಾಲ್ ಅಂಡ್ ಸ್ಪೂನ್, ಕಪ್ ಟವರ್ ಗೇಮ್ ಆಟ ಮತ್ತು 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರನ್ನಿಂಗ್‌ ರೇಸ್, ಕ್ರಿಕೇಟ್, ವಾಲಿಬಾಲ್, ಥ್ರೋಬಾಲ್, ಗುಂಡು ಎಸೆತ, ಚಕ್ರೆಸೆತ ಆಟ, ಪೋಷಕರಿಗೆ ಮ್ಯೂಸಿಕಲ್ ಚೇರ್, ಕಪಲ್‌ ಗೇಮ್ಸ್ ಮತ್ತು ಇತರೇ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿತ್ತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ…

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.