nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ
    ಕೊರಟಗೆರೆ December 15, 2025

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    By adminDecember 15, 2025No Comments2 Mins Read

    ಕೊರಟಗೆರೆ: ಈಡಿಗ, ಬಿಲ್ಲವ, ನಾಮಧಾರಿ, ಧೀವರ ಸೇರಿದಂತೆ 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಸುಮಾರು 700 ಕಿ.ಮೀ ಸತತ 41 ದಿನಗಳ ಐತಿಹಾಸಿಕ ಪಾದಯಾತ್ರೆ ಮಾಡುತ್ತೇವೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಸೇವಾ ಟ್ರಸ್ಟ್ ಪೀಠಾಧಿಪತಿ ಶ್ರೀಪ್ರಣವಾನಂದ ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಅಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ  ನಿಗಮಕ್ಕೆ ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡಬೇಕು. ಕುಲಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ಥ ಈಡಿಗರಿಗೆ 5 ಎಕೆರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡಬೇಕು ಎಂದು ಹೇಳಿದರು.


    Provided by
    Provided by

    ಸಮುದಾಯವನ್ನು 2ಎ ಯಿಂದ ಎಸ್ಟಿ ಗೆ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರು ಸ್ಥಾಪಿಸಬೇಕು, ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿ ಶ್ರದ್ಧಾ ಕೇಂದ್ರವಾದ ಶ್ರೀಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ ಮೊಕದ್ದಮೆಗಳನ್ನು ಕೂಡಲೇ ಹಿಂತೆಗೆದುಕೊಂಡು ದೇವಸ್ಥಾನಕ್ಕೆ ಸೂಕ್ತ ಭದ್ರತೆ ನೀಡಿ ಕ್ಷೇತ್ರಕ್ಕೆ ಅಗತ್ಯ ಭೂಮಿ ಮಂಜೂರು ಮಾಡಬೇಕು ಎಂದರು.

    ಮದ್ಯ ಮಾರಾಟದಲ್ಲಿ ಸಮಾಜದ ಈಡಿಗ ಸೇರಿದಂತೆ 26 ಪಂಗಡಗಳಿಗೆ ಶೇ.50% ರಷ್ಟು ಮೀಸಲಾತಿ ನೀಡಬೇಕು. ಕೋಟಿ ಚೆನ್ನಯ್ಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗಾಗಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಪ್ರಾಧಿಕಾರಕ್ಕ ಪ್ರತಿ ಬಜೆಟ್‌ನಲ್ಲಿ ಕನಿಷ್ಠ 100 ಕೋಟಿ.ರೂ ಮಂಜೂರು ಮಾಡಬೇಕು. ರಾಜ್ಯದ ಎಲ್ಲಾ ವಿಶ್ವ ವಿದ್ಯಾಲಯದಲ್ಲಿ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸುವುದು ಮತ್ತು ರಾಜ್ಯದ ಒಂದು ವಿಶ್ವ ವಿದ್ಯಾಲಯಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಘೋಷಣೆ ಮತ್ತು ಅನುಭವ ಮಂಟಪದಲ್ಲಿ ಈಡಿಗ ಜನಾಂಗದ ಶರಣರಾದ ಹೆಂಡದ ಮಾರಯ್ಯನವರ ಜಯಂತಿ ಆಚರಣೆಯನ್ನು ಸರಕಾರ ಘೋಷಣೆ ಮಾಡುವಂತೆ ಒತ್ತಾಯಿಸಿದರು.

    ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರವಾಗಿ ಮನೆ ಹಾಗೂ ಜಮೀನು ನೀಡುವುದು, ರಾಜ್ಯದಲ್ಲಿ ರಾಜ್ಯದಲ್ಲಿ ನಾರಾಯಣ ಗುರು ಜಯಂತಿ ಆಚರಣೆಯ ಸಂದರ್ಭದಲ್ಲಿ ಸಮುದಾಯದ ಸಾಧಕರಿಗೆ ‘‘ಬ್ರಹ್ಮಶ್ರೀ ನಾರಾಯಣ ಗುರು”  ರಾಜ್ಯ ಮಟ್ಟದ ಪ್ರಶಸ್ತಿಯನ್ನು ಐದು ಲಕ್ಷ ನಗದು ಪುರಸ್ಕಾರದೊಂದಿಗೆ ನೀಡುವುದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸಮುದಾಯದವರು ಅರಣ್ಯ ಪ್ರದೇಶದಲ್ಲಿ ಉಳುಮೆ ಮಾಡಿಕೊಂಡು ಮನೆ ಕಟ್ಟಿಕೊಂಡವರಿಗೆ ಜಮೀನು ಸಕ್ರಮಗೊಳಿಸಬೇಕು.

    ಶಿವಮೊಗ್ಗ ಜಿಲ್ಲೆಯ ಹೊಸನಗರ ಕ್ಷೇತ್ರವನ್ನು ಮರಳಿ ವಿಧಾನಸಭೆ ಕ್ಷೇತ್ರವಾಗಿ ಮಾಡುವುದಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು, ಆಶ್ರಯ ಮತ್ತು ವಸತಿ ಯೋಜನೆಯಲ್ಲಿ ಸಮಾಜಕ್ಕೆ ಪ್ರತ್ಯೇಕವಾಗಿ ೨೫ಸಾವಿರ ಮನೆ ಮಂಜೂರು ಮಾಡಬೇಕು, ಬ್ರಹ್ಮಶ್ರೀ ಗುರುಭವನ ನಿರ್ಮಿಸುವುದಕ್ಕೆ ಭೂಮಿ ಮಂಜೂರು ಮಾಡಬೇಕು, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಘೋಷಣೆ ಮಾಡಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕಿದೆ, ಸಮುದಾಯದ ಟ್ರಸ್ಟ್ವೊಂದಕ್ಕೆ ಮೆಡಿಕಲ್ ಕಾಲೇಜ್ ಮಂಜೂರಾತಿ ಮಾಡುವುದು ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ ಪ್ರತಿ ಜಿಲ್ಲೆಯಲ್ಲಿ 5 ಎಕೆರೆ ಜಮೀನು ಮಾಡಿ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕಿದೆ, ನಮ್ಮ ಬೇಡಿಕೆ ಈಡೇರಿಕೆಯನ್ನು ಈಡೇರಿಸುವಂತೆ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

    ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಈಡಿಗ ಮಹಾಸಭಾದ ಅಧ್ಯಕ್ಷ ರಂಗಶಾಮಯ್ಯ, ಪಾದಯಾತ್ರೆ ಮುಖ್ಯ ಸಂಚಾಲಕ ಲಕ್ಷ್ಮಿನರಸಯ್ಯ,ಮಹಿಳಾ ಅಧ್ಯಕ್ಷೆ ಪ್ರಭಾ, ಮುಖಂಡ ಹನುಮಂತರಾಜು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ನಗರ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ಮಿಗಿಲಾದ ಸಾಧನೆ ಮಾಡಬಲ್ಲರು ಎಂಬುದನ್ನು…

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.