ತಿಪಟೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಮಹತ್ತರ ಪಾತ್ರವಹಿಸಿದ ಈಡಿಗ ಸಮುದಾಯವನ್ನು ಸರ್ಕಾರ ಕಡೆಗಣಿಸಿದೆ, ಈಡಿಗ ಸಮುದಾಯವನ್ನು ಕಂಡರೆ ಮುಖ್ಯಮಂತ್ರಿಗಳಿಗೆ ಆಗುತ್ತಿಲ್ಲ ಎಂದು ಈಡಿಗ ಸಮುದಾಯದ ಪೀಠಾಧಿಪತಿ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು.
ತಿಪಟೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ವಿರೋಧ ಪಕ್ಷವಾಗಿದ್ದ ಸಂದರ್ಭದಲ್ಲಿ ಅಹಿಂದವನ್ನುಅಪ್ಪಿಕೊಂಡ ಸಿದ್ದರಾಮಯ್ಯ ಆಡಳಿತ ಹಿಡಿದ ನಂತರ ಅಹಿಂದ ವನ್ನು ಕಡೆಗಣಿಸಿದ್ದಾರೆ, ಸಮುದಾಯದ ಯುವಕರು ಒಗ್ಗಟ್ಟಾಗಿ ಹೋರಾಡಬೇಕಿದೆ ಇಡೀ ಸಮುದಾಯವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸಿರುವ ಕೆಲವು ಮುಖಂಡರು ಶಾಸಕರು ತಮ್ಮ ವರ್ತನೆಗಳನ್ನು ಬದಲಾಯಿಸಿಕೊಂಡು ಈಡಿಗ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಹೋರಾಡಬೇಕಿದೆ ಎಂದರು.
ಸರ್ಕಾರದ ಕಣ್ಣು ತೆರೆಸಲು ಜನವರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠ ಕರದಾಳದಿಂದ ಬೆಂಗಳೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು, ಅಷ್ಟರೊಳಗೆ ನಮ್ಮ ಸಮುದಾಯದ 18 ಬೇಡಿಕೆಗೆ ಈಡೇರದೆ ಇದ್ದಲ್ಲಿ ಫೆಬ್ರವರಿ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈಡಿಗ ಸಮುದಾಯದ ಮುಖಂಡರಾದ ಎಂ.ಕೆ.ಸ್ವಾಮಿ , ಲಕ್ಷ್ಮಿನರಸಿಂಹಯ್ಯ , ಕೆಎಸ್ಆರ್ಟಿಸಿ ಮಣಿ, ಹನುಮಂತರಾಯಪ್ಪ, ನಾಗರಾಜು , ಸಮುದಾಯದ ಮುಖಂಡರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


