ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗುರುವಾರ ನಡೆದಿದೆ.
ಕಳ್ಳಂಬೆಳ್ಳ ಗ್ರಾಮದ ನಿವಾಸಿ ಮಧುವನ್ (36) ಕೊಲೆಯಾದ ದುರ್ದೈವಿ. ತುಮಕೂರು ಸಂತೇಪೇಟೆಯ ನಿವಾಸಿಗಳಾದ ಮಹೇಶ್ ಮತ್ತು ಸಮೀರ್ ಎಂಬುವವರೊಂದಿಗೆ ಜಮೀನಿನ ವಿಚಾರವಾಗಿ ಮಧುವನ್ ಗೆ ವಿವಾದವಿತ್ತು ಎನ್ನಲಾಗಿದೆ.
ಗುರುವಾರ ಈ ಮೂವರ ನಡುವೆ ಮಾತಿನ ಚಕಮುಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಎಂಬಾತ ಮಧುವನ್ ಮೇಲೆ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ಮಧುವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


