ಬೆಳಗಾವಿ: ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ‘ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘ’ದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸಿ.ಡಿ. ಹಾಗೂ ರಾಜ್ಯ ಉಪಾಧ್ಯಕ್ಷ ನಟರಾಜು ಜಿ.ಎಲ್. ಅವರು ಕಾರ್ಮಿಕ ಇಲಾಖೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ, ಐಟಿ–ಬಿಟಿ ಇಲಾಖೆ ಸಂಬಂಧಿಸಿದಂತೆ ಐಟಿ–ಬಿಟಿ ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಮನವಿ ಪತ್ರದಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ, ಪತ್ರಕರ್ತರ ರಕ್ಷಣಾ ಕಾಯ್ದೆ ಜಾರಿ, ವಾರ್ತಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ, ವಿಧಾನಸೌಧ–ವಿಕಾಸಸೌಧ ಪ್ರವೇಶ ಸೌಲಭ್ಯ, ಜೀವ ವಿಮಾ ಸೌಲಭ್ಯ, ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಲಾಗಿದೆ.
ಇದಲ್ಲದೆ, ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಅಪಘಾತ ಅಥವಾ ಸಹಜ ಸಾವು ಸಂಭವಿಸಿದಲ್ಲಿ ಪತ್ರಕರ್ತರ ಕುಟುಂಬಗಳಿಗೆ ಸರ್ಕಾರದಿಂದ ₹10 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವ ಹಿರಿಯ ಹಾಗೂ ನಿಯತಕಾಲಿಕೆ ಪತ್ರಕರ್ತರಿಗೆ ಮಾಸಾಶನ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಂಘದ ಮುಖಂಡರು ಮನವಿ ಮಾಡಿದರು.
ಮನವಿಯನ್ನು ಸ್ವೀಕರಿಸಿದ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳು, ಪತ್ರಕರ್ತರ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


