ತುಮಕೂರು : ಜಿಲ್ಲೆಯ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನ ಉದ್ಘಾಟನೆಯ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬಂಜಾರ ಸಮುದಾಯದ ಕಾರ್ಯಕ್ರಮಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ ಡಿ., ಬರುವ ಏಪ್ರಿಲ್ ತಿಂಗಳಲ್ಲಿ ಬಂಜಾರ ಜನಾಂಗದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಜೊತೆಗೆ ಸಮುದಾಯದ ಒಗ್ಗಟ್ಟಿಗೂ ಬಲ ಸಿಗಲಿದೆ ಎಂದರು.
ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಯೋಜನೆಯನ್ನೂ ರೂಪಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಸಿದ್ಧರಾಗಲು ಮಾರ್ಗದರ್ಶನ, ತರಬೇತಿ ಶಿಬಿರಗಳು ಹಾಗೂ ಅಧ್ಯಯನ ಸಹಾಯವನ್ನು ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಬಂಜಾರ ಭವನದ ನಿರ್ವಹಣೆ, ಉದ್ಘಾಟನೆಗೆ ಸಂಗ್ರಹವಾದ ಹಣಕಾಸಿನ ಜಮಾ–ಖರ್ಚಿನ ವಿವರಗಳ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮುದಾಯದ ಹಿರಿಯರು, ಮುಖಂಡರು ಹಾಗೂ ಸದಸ್ಯರು ತಮ್ಮ ಸಲಹೆಗಳನ್ನು ನೀಡಿದರು.
ಬಂಜಾರ ಭವನವನ್ನು ಮುಂದಿನ ದಿನಗಳಲ್ಲಿ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಕರೆ ನೀಡಲಾಯಿತು.
ಜಿಲ್ಲಾ ಬಂಜಾರ ಭವನ: ಜಿಲ್ಲಾಧ್ಯಕ್ಷರಿಂದ ಧನ್ಯವಾದ
ತುಮಕೂರು : ನಗರದ ಸರಸ್ವತಿಪುರಂನಲ್ಲಿರುವ 3 ಮೂರು ಕೋಟಿ ವೆಚ್ಚದಲ್ಲಿ ಸುಂದರವಾದ ಜಿಲ್ಲಾ ಬಂಜಾರ ಭವನಯು ಡಿ.13 ರಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉದ್ಘಾಟನೆಯನ್ನು ಮಾಡಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ ಬಂಜಾರ ಸಮುದಾಯದ ಹಿರಿಯರು ಕಿರಿಯರು ಮುಖಂಡರು ಎಲ್ಲರಿಗೂ ಕೂಡ ನಾನು ಧನ್ಯವಾದಗಳು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ಸಮುದಾಯದ ಎಲ್ಲಾ ಕಾರ್ಯಕ್ರಮಗಳನ್ನು ಈ ಭವನದಲ್ಲಿ ಮಾಡಿ ಕೊಂಡು ಜೊತೆಗೆ ಹೋಗೋಣ ಎಂದು ತಿಳಿಸಿದರು.
ಇದೇ ವೇಳೆ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಲೋಹಿತಾ ಬಾಯಿ, ಜಿಲ್ಲಾ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ಉಪಾಧ್ಯಕ್ಷರು ಕುಬೇಂದ್ರ ನಾಯ್ಕ ಎಲ್., ಬಂಜಾರ ಸಮುದಾಯದ ಮುಖಂಡರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


