ದಾವಣಗೆರೆ: ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ದರ್ಶನ್ ಅವರ ಅನುಪಸ್ಥಿತಿಯಲ್ಲಿ ಕೆಲವರು ಅವರ ವಿರುದ್ಧ ಮತ್ತು ಅಭಿಮಾನಿಗಳ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ದರ್ಶನ್ ಅವರು ಬೆಂಗಳೂರಿನಲ್ಲಿದ್ದಾಗ ಮಾತನಾಡದವರು, ಈಗ ಅವರು ಇಲ್ಲದ ಸಮಯದಲ್ಲಿ ವೇದಿಕೆಗಳ ಮೇಲೆ ಮತ್ತು ಸುದ್ದಿ ವಾಹಿನಿಗಳಲ್ಲಿ ಕುಳಿತು ಮಾತನಾಡುತ್ತಿದ್ದಾರೆ. ಆದರೆ ಅಭಿಮಾನಿಗಳು ಇಂತಹ ಟೀಕೆಗಳಿಗೆ ತಲೆಕೆಡಿಸಿಕೊಳ್ಳಬಾರದು. ಯಾವುದೇ ಕಾರಣಕ್ಕೂ ಉದ್ವೇಗಕ್ಕೆ ಒಳಗಾಗದೆ ಶಾಂತಿಯುತವಾಗಿ ಇರಬೇಕು” ಎಂದು ಅವರು ಅಭಿಮಾನಿಗಳಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ‘ಡೆವಿಲ್’ ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಅವರು, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಮತ್ತು ಪೈರಸಿಯನ್ನು ಪ್ರೋತ್ಸಾಹಿಸಬೇಡಿ ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಚಿತ್ರದ ನಟಿ ರಚನಾ ರೈ ಮತ್ತು ಹಾಸ್ಯ ನಟ ಹುಲಿ ಕಾರ್ತಿಕ್ ಕೂಡ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


