nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    ಜಿಲ್ಲಾ ಸುದ್ದಿ December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    By adminDecember 22, 2025No Comments2 Mins Read
    sargur

    ಸರಗೂರು:  ತಾಲೂಕಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೆಳಿಗ್ಗೆ ಬಂದಂತಹ 2 ಆರ್ ಡಿ ಎಕ್ಸ್ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಮೇಲ್ ಸಂದೇಶ ಕೆಲಕಾಲ ಆತಂಕಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಕಾರಣವಾಗಿತ್ತು.

    ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ತಕ್ಷಣ ತೆರವುಗೊಳಿಸಿ’ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಉಲ್ಲೇಖಿಸಿ, ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ ಎಂಬ ಈ-–ಮೇಲ್ ಐಡಿಯಿಂದ ಬೆಳಿಗ್ಗಿನ ಜಾವ 5 ರ ಸುಮಾರಿಗೆ ದುಷ್ಕರ್ಮಿಯೊಬ್ಬರು ಸಂದೇಶ ರವಾನಿಸಲಾಗಿತ್ತು.  ಮೇಲ್ ನೋಡಿದ ಸಮಯದಲ್ಲಿ ತಾಲೂಕು  ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಭಯಭೀತರಾಗಿ ತಹಶೀಲ್ದಾರ್ ಮೋಹನಕುಮಾರಿ ಗಮನಕ್ಕೆ ತಂದ ಕೂಡಲೇ ಪೋಲಿಸ್ ಠಾಣೆಗೆ ಮಾಹಿತಿ ನೀಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಕಚೇರಿಯಿಂದ ಹೊರ ಕೇಳಿದ್ದಾರೆ.

    ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮೈಸೂರುದಿಂದ ಆಗಮಿಸಿದ ಬಾಂಬ್ ನಿಷ್ಕ್ರೀಯ ಹಾಗೂ ಶ್ವಾನ ದಳದಿಂದ ಕಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿತು.ಸರಗೂರು ಪೊಲೀಸ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

    ತಹಶೀಲ್ದಾರ್ ಕಚೇರಿ ಇರುವುದರಿಂದ, ತಹಶೀಲ್ದಾರ್ ಕಚೇರಿಯನ್ನು ಮಾತ್ರವಲ್ಲದೆ ಇಡೀ ಕಟ್ಟಡವನ್ನು ಸಂಪೂರ್ಣವಾಗಿ ಶೋಧಿಸಲಾಯಿತು. ಆದಾಗ್ಯೂ, ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ, ನಂತರ ಇಮೇಲ್ ನಕಲಿ ಎಂದು ಸಾಬೀತಾಯಿತು.

    ನಿಷ್ಕ್ರಿಯ ಹಾಗೂ ಶ್ವಾನದಳ ಪರಿಶೀಲನೆ ನಡೆಸಿ ನಂತರ ತಹಶೀಲ್ದಾರ್ ರವರಿಗೆ ಕಚೇರಿಯಲ್ಲಿ ಯಾವುದೇ ತರಹದ ಬಾಂಬ್ ವಸ್ತುಗಳು ಕಾಣಿಸಿಲ್ಲ ಎಂದು ತಿಳಿಸಿದರು.

    ಸಾರ್ವಜನಿಕರು ಹಾಗೂ ಸಿಬ್ಬಂದಿಗಳು ಆತಂಕ:

    ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದ ನಂತರ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.  ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲೇ ಭಾರೀ ಬಾಂಬ್ ಸ್ಫೋಟ ಸಂಭವಿಸಲಿದೆ, ಎಲ್ಲಾ ಜನರನ್ನು ತಕ್ಷಣವೇ ಸ್ಥಳಾಂತರಿಸಬೇಕು” ಎಂದು ಇಮೇಲ್‌ ನ ವಿಷಯ ಕನ್ನಡದಲ್ಲಿ ಬರೆಯಲಾಗಿದ್ದು ತಾಲೂಕಿನ ಜನತೆಯಲ್ಲಿ ಭಯಭೀತಿ ಎದುರಾಗಿತ್ತು.

    ನಂತರ ಮಾತನಾಡಿದ ತಹಶೀಲ್ದಾರ್ ಮೋಹನಕುಮಾರಿ,   ಕಚೇರಿಯ ಶೀರಲ್ದಾರ್ ಮನೋಹರ್ ಮೇಲ್ ಯನ್ನು ಪ್ರತಿ ದಿನ ನೋಡುತ್ತಾರೆ,  ಅದರಿಂದ ಇದ್ದು ನೋಡುವಾಗ ಕಂಡು ಬಂದಿದೆ. ಮೇಲ್ ಯಲ್ಲಿ ಸರಗೂರು ತಾಲೂಕು ಇರುವುದರಿಂದ ನಾವುಗಳು ಗಂಭೀರವಾಗಿ ವಿಷಯವನ್ನು ತೆಗೆದುಕೊಳ್ಳುವ ಬೇಕಾಗಿತ್ತು.ನಮ್ಮ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಕೂಡಲೇ ಶೀಘ್ರದಲ್ಲೇ ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಹೊರ ಕಳಿಸಿ.ಕೂಡಲೇ ಜಿಲ್ಲಾಧಿಕಾರಿಗಳು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿ ನಿಷ್ಕ್ರಿಯ ಹಾಗೂ ಶ್ವಾನದಳ ಈಶಾ ಒಂದು ಗಂಟೆ ಕಾಲ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿ ಬಾಂಬ್ ವಸ್ತುಗಳು ಕಾಣಿಸಿಲ್ಲ ಎಂದು ವರದಿ ನೀಡಿದ್ದಾರೆ.ಅನುಮಾನಾಸ್ಪದ ರೀತಿಯಲ್ಲಿ ಯಾವುದೇ ಕಂಡು ಬಂದಿಲ್ಲ . ತಾಲೂಕಿನ ತಹಸಿಲ್ದಾರ್ ಕಚೇರಿಯಲ್ಲಿ ಘಟನೆ ನಡೆದಿದ ಹಿನ್ನೆಲೆಯಲ್ಲಿ ಯಾರೂ ಆತಂಕದಲ್ಲಿ ಒಳಗಡದೆ ದಿನನಿತ್ಯ ಸಾರ್ವಜನಿಕರು ಕೆಲಸ ನಿರಂತರವಾಗಿ ಬರಬಹುದು ಎಂದು ಮನವಿ ಮಾಡಿಕೊಂಡರು.

    ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ಮೇರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ಆತಂಕದಲ್ಲಿ ನೋಡುತ್ತಿರುವ ದೃಶ್ಯ.

    ಈ ಸಂದರ್ಭದಲ್ಲಿ ತಹಸೀಲ್ದಾರ್ ಮೋಹನಕುಮಾರಿ, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್ಐ ಆರ್ ಕಿರಣ್, ಕ್ರೈಂ ಬ್ರಾಂಚ್ ಪಿಎಸ್ಐ ಗೋಪಾಲ್,ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್,ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಸದಸ್ಯ ಶ್ರೀನಿವಾಸ, ನಿಷ್ಕ್ರಿಯ ಹಾಗೂ ಶ್ವಾನದಳ ಅಧಿಕಾರಿ ರಾಘವೇಂದ್ರ, ಪುಟ್ಟರಾಜು, ರಾಜೇಶ್, ಮಂಜುನಾಥ,ಭೈರಶ್ನಾಯಕ, ಮಂಜು, ಸಿಬ್ಬಂದಿ ವರ್ಗದವರು ಗ್ರೇಟ್ 2 ತಹಸಿಲ್ದಾರ್ ಪರಶಿವಮೂರ್ತಿ, ಉಪತಹಸೀಲ್ದಾರ್ ಸುನೀಲ್, ಆರ್ ಐ ರವಿಚಂದ್ರನ್,ಮುಜಿಂಬ್, ಶ್ರೀನಿವಾಸ, ಇಮ್ರಾನ್, ಸುನೀಲ್, ಕೃಷ್ಣಯ್ಯ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.