ತಿಪಟೂರು: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 24ರಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಕೆರೆಗೋಡಿ–ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕಲಾಕೃತಿ ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಧರ್, ರಂಗಾಪುರ ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಈ ಬೃಹತ್ ಸಾಂಸ್ಕೃತಿಕ ಹಬ್ಬ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಯಕ್ಷಗಾನ, ದಾಂಡಿಯಾ, ಮಣಿಪುರಿ ನೃತ್ಯ ಹಾಗೂ ಡೊಳ್ಳು ಕುಣಿತ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕಲಾಪ್ರಕಾರಗಳ ಪ್ರದರ್ಶನವಿರಲಿದೆ.
ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕಲಾಕೃತಿ ಕಾರ್ಯದರ್ಶಿ ಜ್ಯೋತಿ ಗಣೇಶ್, ತಿಪಟೂರು ಕೃಷ್ಣ, ವೊಡಾಫೋನ್ ಚಂದ್ರು ಹಾಗೂ ತೋಂಟಿ ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


