ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಡಿಯುತ್ತಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪಂಚಾಯಿತಿ ಆವರಣದಲ್ಲಿ ಧರಣಿ ಕುಳಿತರು.
ಪ್ರತಿಭಟನೆಗೆ ಮುಖ್ಯ ಕಾರಣಗಳು: ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ ದಂಧೆ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿವೆ. ವಾರ್ಡ್ ಸಭೆಗಳನ್ನು ನಡೆಸದಿರುವುದು, ‘ಇ-ಸ್ವತ್ತು’ ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮತ್ತು ವಾಣಿಜ್ಯ ಮಳಿಗೆಗಳಿಂದ ಅತಿಯಾದ ಸುಂಕ ವಸೂಲಿ ಮಾಡುತ್ತಿರುವುದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ದಲಿತರ ಬೀದಿಗಳನ್ನು ಸ್ವಚ್ಛಗೊಳಿಸದೆಯೇ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಸಾರ್ವಜನಿಕರೊಂದಿಗೆ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ ಎಂದು ದೂರಿದರು.
ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮುಖಂಡರು ಪಟ್ಟು ಹಿಡಿದರು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


