ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್, ಮತ್ತು ಕಂಪ್ಯೂಟರ್ ಆಪರೇಟರ್ ಸುಬ್ರಹ್ಮಣ್ಯರವರ ಹಗರಣ ವಿರುದ್ದ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ನಡೆಸುತ್ತಿದ್ದ ಪ್ರತಿಭಟನೆಯ ಎರಡು ದಿನಗಳ ನಂತರ ಕೈಬಿಡಲಾಗಿದೆ.
ಡಿ.23ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಡಿ.24ರಂದು ಕೂಡ ಪ್ರತಿಭಟನೆ ಮುಂದುವರಿದಿತ್ತು. ಸಿಇಒ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.
ಆದರೆ ಕಾರಣಾಂತರಗಳಿಂದ ಸಿಇಒ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿಲ್ಲ, ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರು ಅಹವಾಲು ಸ್ವೀಕರಿಸಿದರು. ನಂತರ ಹಗರಣಗಳ ಬಗ್ಗೆ ಮಾಹಿತಿ ಪಡೆದು, ತನಿಖಾಧಿಕಾರಿಗಳನ್ನು ನೇಮಕ ಮಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು.
ಎಚ್ಚರಿಕೆ: ಸಮಸ್ಯೆಗಳ ಪರಿಹಾರದ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ದು, ಒಂದು ವೇಳೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಗೆ ಕಾರಣ ಏನು?
ಪಿಡಿಒ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಪ್ರತಿಭಟನಾಕಾರರು ಮಾಡಿದ್ದಾರೆ, ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ (i-MAAS) ದಂಧೆ, ಪಂಚಾಯಿತಿ ಹಣ ದುರ್ಬಳಕೆ ಹಾಗೂ ಇ-ಸ್ವತ್ತು ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ. ಇದಲ್ಲದೆ, ವಾರ್ಡ್ ಸಭೆಗಳನ್ನು ನಡೆಸದಿರುವುದು, ದಲಿತರ ಬೀದಿಗಳ ಸ್ವಚ್ಛತೆ ಮಾಡದೆ ಬಿಲ್ ಪಾವತಿಸಿಕೊಳ್ಳುವುದು ಹಾಗೂ ಸಾರ್ವಜನಿಕರೊಂದಿಗೆ ದುರ್ವರ್ತನೆ ತೋರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


