ತಿಪಟೂರು: ನಗರದ ಕೋಡಿ ಸರ್ಕಲ್ ನ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಸಬಾ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪರವರ ಸಮ್ಮುಖದಲ್ಲಿ ನಡೆಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಎಂ.ಶೀನಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಿಗೆ ಬ್ಯಾಂಕಿನ ಮೂಲಕ ನಡೆಯುವ ವ್ಯವಹಾರದ ಪಾರದರ್ಶಕತೆ ಹಾಗೂ ಯೋಜನೆಯ ಯಶಸ್ವಿ ಕಾರ್ಯಕ್ರಮಗಳಾದ ಕೃಷಿ, ಜ್ಞಾನವಿಕಾಸ, CSC, ಶುದ್ಧಗಂಗಾ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿ ರಾಜ್ಯದ ಬಡಜನತೆಯ ಅಭ್ಯುದಯಕ್ಕೆ ಸರಕಾರಗಳೊಟ್ಟಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವಿರತ ಶ್ರಮಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಮಾತನಾಡಿ, ಧರ್ಮಸ್ಥಳ ಸಂಘಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಒಕ್ಕೂಟಪದಾಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಎಳೆಎಳೆಯಾಗಿ ತಿಳಿಸಿ ಸಂಘದ ಪಾಲುದಾರಬಂದುಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಉದಯ್ ಕೆ., ವಲಯ ಮೇಲ್ವಿಚಾರಕ ಜಯಪ್ರಸಾದ್, ಕಸಬಾ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


