ಕೊರಟಗೆರೆ : ಗೃಹ ಸಚಿವ ಹಾಗೂ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ ರವರು ಇಂದು ಕೊರಟಗೆರೆ ತಾಲ್ಲೂಕಿನಲ್ಲಿ 4 ಕಡೆ ಹಾಲು ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೊಡ್ಲಹಳ್ಳಿ ಅಶ್ವಥನಾರಾಯಣ್, ಅರಕೆರೆ ಶಂಕರ್ ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ ಗೃಹ ಸಚಿವಾರದ ಡಾ.ಜಿ. ಪರಮೇಶ್ವರರವರು ಇಂದು ವಿವಿಧ ಭಾಗಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಕೊಳಾಲ ಹೋಬಳಿಯ ಬೈರಗೊಂಡ್ಲು, ಪುಟ್ಟಸಂದ್ರ ಗ್ರಾಮಗಳಲ್ಲಿ ಹಾಲಿ ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ.
ಕಸಬಾ ಹೋಬಳಿಯ ತೀತಾ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ, ನಂತರ ಹೊಳವನಹಳ್ಳಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆಯುವ ಯೇಸು ಕ್ರಿಸ್ತ ಜಯಂತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


