ಔರಾದ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರತಿಕಾಂತ್ ಸ್ವಾಮಿ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ರಕ್ತದಾನವು ಜೀವದಾನಕ್ಕೆ ಸಮಾನ. ತಾಲೂಕಿನ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು” ಎಂದು ಕರೆ ನೀಡಿದ್ದಾರೆ.
ರಕ್ತದಾನ ಮಾಡಲು ಆಸಕ್ತಿ ಇರುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಡಾ. ಸಿದ್ಧಾರಡ್ಡಿ ಅವರ ದೂರವಾಣಿ ಸಂಖ್ಯೆ: 9663859062ಕ್ಕೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಈ ಸದವಕಾಶವನ್ನು ಬಳಸಿಕೊಂಡು ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕೆಂದು ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


