ಬೆಂಗಳೂರು: ರಾಜ್ಯಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತುಮಕೂರು ಎಸ್ಪಿ ಕೆ.ವಿ.ಅಶೋಕ್ ಅವರಿಗೂ ಹೊಸ ವರ್ಷದ ಸಂದರ್ಭದಲ್ಲಿ ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಶ್ರೇಣಿಯಲ್ಲಿ ಮುಂಬಡ್ತಿ ದೊರೆತಿದ್ದು, ತುಮಕೂರು ಎಸ್ಪಿ ಸ್ಥಾನದಲ್ಲಿ ಮುಂದುವರಿಸಲಾಗಿದೆ. ಈ ಮೂಲಕ ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ತದ ಬದಲಾವಣೆಗಳನ್ನು ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪಟ್ಟಿಗೆ ಅನುಮೋದನೆ ನೀಡಿದ್ದಾರೆ. ಈ ಪ್ರಮುಖ ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


