ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆ, ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಜನವರಿ 7 ಮತ್ತು 8ರಂದು ನಗರದ ಗಾಜಿನ ಮನೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ, ವಾಣಿಜ್ಯ ಮೇಳ ಹಾಗೂ ಬೆಳೆ ಉತ್ಪಾದನೆಯಾಚೆಗಿನ ಕೃಷಿ–ರೈತರ ಸಬಲೀಕರಣ ಎಂಬ ನೂತನ ಪರಿಕಲ್ಪನೆಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಜನವರಿ 7ರಂದು ಬೆಳಗ್ಗೆ 10.30 ಗಂಟೆಗೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಉದ್ಘಾಟಿಸುವರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸುವರು.
ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಸಿರಿಧಾನ್ಯಗಳ ರಾಶಿ ಪೂಜೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸಿರಿಧಾನ್ಯಗಳ ಹಸ್ತಪ್ರತಿ ಬಿಡುಗಡೆ ಮಾಡುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಎಸ್. ಕಳ್ಳೆನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


