nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    • ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು January 6, 2026

    ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminJanuary 6, 2026No Comments2 Mins Read
    shubha kalyan

    ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

    ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲೆಯಲ್ಲಿ ತೆರೆಯಲಾಗಿರುವ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 7304975519 ಅಥವಾ 0816–2213400, 155304 ಈ ನಂಬರಿಗೆ ಸಾರ್ವಜನಿಕರು ದೂರು ಸಲ್ಲಿಸಬೇಕು. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಬಹುದಾಗಿದೆ ಎಂದರು.


    Provided by
    Provided by

    ಮಧುಗಿರಿ, ಶಿರಾ, ಕೊರಟಗೆರೆ ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗುತ್ತಿರುವ ಬಗ್ಗೆ ಪ್ರಯೋಗಾಲಯದ ವರದಿ ಬಂದಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಅಲ್ಲದೆ ಬಯಲು ಶೌಚ ಇನ್ನಿತರ ಸಾಂಕ್ರಾಮಿಕ ರೋಗ ಹರಡಬಹುದಾದ ವಿಷಯಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

    ಸಾಂಕ್ರಾಮಿಕ ರೋಗಗಳು ಹರಡಬಹುದಾದ ವಿದ್ಯಾರ್ಥಿನಿಲಯಗಳ ನೀರು ಸರಬರಾಜು, ಜಾತ್ರೆ, ಹಬ್ಬಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕೆಂದು ತಿಳಿಸಿದ ಅವರು, ತಮ್ಮ ತಾಲೂಕುಗಳಲ್ಲಿ ಯಾವ ಹಬ್ಬ, ಜಾತ್ರೆಗಳು ನಡೆಯುತ್ತವೆ, ಹೆಚ್ಚು ಜನರು ಸೇರುವ ಜಾಗಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಅವರು ಜಾತ್ರೆ ಮತ್ತು ಹಬ್ಬ ಆಚರಣೆಗೆ ಅನುಮತಿಸುವ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ಹಾಗೂ ಎಚ್ಚರಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.

    ಊರುಹಬ್ಬ, ಜಾತ್ರೆ ನಡೆಸಲು ತಹಶೀಲ್ದಾರ್ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದ ಅವರು, ತಾಲೂಕು ಆಡಳಿತದ ಅನುಮತಿ ಇಲ್ಲದೆ ಹಬ್ಬ ಅಥವಾ ಜಾತ್ರೆ ನಡೆದ ಬಗ್ಗೆ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಆಯೋಜನೆಗೊಳ್ಳುವ ಊರ ಹಬ್ಬ/ಜಾತ್ರೆಗಳ ವೇಳೆ ಆಹಾರ/ಪ್ರಸಾದ ಮತ್ತು ಕುಡಿಯುವ ನೀರಿನಿಂದ ಹರಡಬಹುದಾದ ಕಾಯಿಲೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸಿ ಆರೋಗ್ಯ ಇಲಾಖೆ ಸಮನ್ವಯದೊಂದಿಗೆ ಸಂಪೂರ್ಣ ಮೇಲ್ವಿಚಾರಣೆ ವಹಿಸಲು ಸೂಚಿಸಿದರು.

    ಗ್ರಾಮಗಳಲ್ಲಿನ ಕೊಳವೆಬಾವಿ, ಪೈಪ್‌ ಲೈನ್ ಓಹೆಚ್‌ ಟಿ ಆರ್‌ಒ ಪ್ಲಾಂಟ್ ಇತ್ಯಾದಿಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಊರ ಹಬ್ಬ/ಜಾತ್ರೆಗಳ ಅವಧಿಯಲ್ಲಿ ಸಂಬಂಧಪಟ್ಟ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೌಕರರು ಗ್ರಾಮಸ್ಥರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಕೂಡಲೇ ಆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ಮೇಲಾಧಿಕಾರಿಗಳಿಗೆ ವರದಿ ಮಾಡಬೇಕೆಂದು ಸೂಚನೆ ನೀಡಿದರು.

    ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ತುಮಕೂರು ಜಿಲ್ಲೆಯ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವಲ್ಲಿ ಕೈಗೊಳ್ಳಬೇಕಾದ ಎಲ್ಲಾ ಅಗತ್ಯ ಕ್ರಮಗಳ ಕುರಿತು ಯಾವುದೇ ಅಧಿಕಾರಿ ನಿರ್ಲಕ್ಷ್ಯ ತೋರಿದ್ದಲ್ಲಿ ಅಂತಹ ಅಧಿಕಾರಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನಿರ್ದೇಶನ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಎಲ್ಲ ಹಂತದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು…

    ಧಾರವಾಡ: ಮಾ.5ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ

    March 4, 2026

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.