ತಿಪಟೂರು: ಇಲ್ಲಿನ ನಗರದ ನಿವಾಸಿಯಾದ ಗೌರವ್ ಎಂಬ ಬಾಲಕ ಇಂದು ಬೆಳಿಗ್ಗೆ ಟ್ಯೂಷನ್‌ಗೆ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ.
ಬಾಲಕನು ಇಂದು ಮುಂಜಾನೆ ಮನೆಯಿಂದ ಟ್ಯೂಷನ್‌ಗೆ ತೆರಳಿದ್ದನು. ಆದರೆ ತರಗತಿ ಮುಗಿದ ನಂತರವೂ ಆತ ಮನೆಗೆ ತಲುಪಿಲ್ಲ. ಕುಟುಂಬಸ್ಥರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಬಾಲಕನ ಚಹರೆ: ಕಾಣೆಯಾದ ಸಮಯದಲ್ಲಿ ಬಾಲಕನು ನೀಲಿ ಬಣ್ಣದ ಟ್ರ್ಯಾಕ್ ಪ್ಯಾಂಟ್ ಹಾಗೂ ಸ್ವೆಟರ್ ಧರಿಸಿದ್ದನು ಎಂದು ತಿಳಿದುಬಂದಿದೆ.
ಸಾರ್ವಜನಿಕರಲ್ಲಿ ವಿನಂತಿ: ಈ ಬಾಲಕನ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಅಥವಾ ಬಾಲಕ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಬೇಕೆಂದು ಪೋಷಕರು ವಿನಂತಿಸಿದ್ದಾರೆ.
ಸಂಪರ್ಕ ಸಂಖ್ಯೆ: 9844437887
ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


