nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ
    ರಾಜ್ಯ ಸುದ್ದಿ January 12, 2026

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    By adminJanuary 12, 2026No Comments2 Mins Read
    madikeri
    • ರಾಘವೇಂದ್ರ ಅಡಿಗ ಎಚ್ಚೆನ್

    ಸಿನಿ ತಂಡಗಳು ಪ್ರೇಕ್ಷಕರನ್ನ ಸೆಳೆಯಲು ಎಲ್ಲಿಲ್ಲದ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥ ಆಫರ್ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹದ್ದೇ ಆಫರ್ ನೀಡಿದೆ. ‘ಕೊರಗಜ್ಜ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಆದರೆ ಇದಕ್ಕೆ ಕೊಡಗಿನ ದೈವ ನರ್ತಕರಿಂದ ಆಕ್ರೋಶ ವುಕ್ತವಾಗಿದೆ.

    ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್  ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಚಿತ್ರತಂಡ ನೀಡಿದೆ. ʻಕಾಂತಾರʼ ಸಿನಿಮಾದಲ್ಲಿ ದೈವ ವಿಡಂಬನೆ ಕುರಿತು ಸಾಕಷ್ಟು ಜನ ದೈವದ ವೇಷಭೂಷಣ ಹಾಕಿಕೊಂಡು ಸಿಕ್ಕಸಿಕ್ಕಲ್ಲಿ ರೀಲ್ಸ್‌ ಮಾಡುತ್ತಾ ದೈವಗಳಿಗೆ ಅಪಮಾನ ಮಾಡಿದ್ದರು. ಇದೀಗ ತುಳುನಾಡಿನ ಆರಾಧ್ಯ ದೈವವಾಗಿರುವ ಕೊರಗಜ್ಜನ ಕುರಿತು ರೀಲ್ಸ್‌ ಮಾಡಿ ಹೆಚ್ಚು ಲೈಕ್ಸ್, ವೀವ್ಸ್‌ ಗಳಿಸಿದವಿಗೆ ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿರುವುದು ಖಂಡನೀಯವಾಗಿದೆ. ಈ ತಪ್ಪು ಮುಂದುವರಿದ್ರೆ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗುವುದಾಗಿ ಹೇಳಿದ್ದಾರೆ.

    ಈ ರೀಲ್ಸ್ ಸ್ಪರ್ಧೆ ಆಯೋಜನೆಯಿಂದ ಸಾವಿರಾರು ಯುವ ಜನತೆ ಬೀದಿ ಬೀದಿಗಳಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿಯಲು ಶುರುಮಾಡುತ್ತಾರೆ, ಇದರಿಂದ ದೈವ ನಿಂದನೆಯಾಗುತ್ತದೆ. ದೇವರ ಅಪಹಾಸ್ಯ ಮಾಡಿದಂತಾಗುತ್ತದೆ. ಇದು ಜನಪದ ಕಲೆಯಲ್ಲ. ಬದಲಿಗೆ ದೈವ ಆರಾಧನೆ. ಕೊರಗಜ್ಜನನ್ನ ನಂಬುವ ಕೋಟ್ಯಂತರ ಭಕ್ತರಿದ್ದಾರೆ. ಕೊರಗಜ್ಜನ ರೀಲ್ಸ್ ಮಾಡುವುದರಿಂದ ಇವರೆಲ್ಲರ ನಂಬಿಕೆಗೆ ಘಾಸಿಯಾಗುತ್ತದೆ ಎಂದು ದೈವ ಆರಾಧಕರು ಆಕ್ರೋಶ ಹೊರ ಹಾಕಿದ್ದಾರೆ. ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಫಿಲ್ಮ್ ಚೇಂಬರ್ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ದೈವ ನರ್ತಕ ಮಂಜುನಾಥ್ ಆಗ್ರಹಿಸಿದ್ದಾರೆ.

    ಕರಾವಳಿ ಭಾಗದ ಕಾರಣಿಕದ ಶಕ್ತಿಯಾಗಿರುವ ಕೊರಗಜ್ಜ ದೈವದ ಕಥೆ ಆಧರಿತ ಸಿನಿಮಾ ಬಿಡುಗಡೆಗೆ ಸಿದ್ಧಗೊಂಡಿದೆ. ಚಿತ್ರದ ಪ್ರಚಾರಕ್ಕಾಗಿ ಕೊರಗಜ್ಜ ಚಿತ್ರದಲ್ಲಿರುವ 6 ಹಾಡುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಸಿನಿಮಾದ ಪ್ರಚಾರಕ್ಕಾಗಿ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಆಯೋಜಿಸಿದೆ. ಇದನ್ನ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ತೀವ್ರವಾಗಿ ಖಂಡಿಸಿದೆ. ಕಾನೂನು ಹೋರಾಟಕ್ಕೂ ಮುಂದಾಗುವುದಾಗಿ ದೈವ ನರ್ತಕರ ಸಂಘದ ಪ್ರಮುಖರು ತಿಳಿಸಿದ್ದಾರೆ. ನಂಬಿದವರಿಗೆ ಇಂಬು ನೀಡುವ ದೇವರೆಂದೇ ಖ್ಯಾತಿಯಾಗಿರುವ ಕೊರಗಜ್ಜನನ್ನ ಬಳಸಿ ರೀಲ್ಸ್ ಮಾಡಲು ಹೊರಟಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.