nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    ತುಮಕೂರು January 14, 2026

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    By adminJanuary 14, 2026No Comments2 Mins Read
    handi jogis

    ತುಮಕೂರು: ಜಿಲ್ಲೆಯಲ್ಲಿ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಇತರೆ ಜನಾಂಗದವರು ಸುಳ್ಳು ದಾಖಲಾತಿಗಳನ್ನು ನೀಡಿ, ಅಕ್ರಮವಾಗಿ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿದ ಹಂದಿಜೋಗಿಸ್ ಜನಾಂಗದ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡು ಹಂದಿಜೋಗಿಸ್ ಜನಾಂಗಕ್ಕೆ ಸೇರಬೇಕಾದ  ಸರ್ಕಾರದ ಸೌಲಭ್ಯಗಳು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ‍್ದಾರೆ ಇದರಿಂದ ನಿಜವಾದ ಹಂದಿಜೋಗಿಸ್ ಜನಾಂಗದವರಿಗೆ ತೊಂದರೆಯಾಗುತ್ತಿದೆ ಎಂದು ತುಮಕೂರು ಜಿಲ್ಲಾ ಹಂದಿಜೋಗಿಸ್ ಸಂಘ ಜಂಟಿ ನಿರ್ದೇಶಕರು ತುಮಕೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಮನವಿ ಸಲ್ಲಿಸಿದ್ದಾರೆ.

    ನಿಜವಾದ ಹಂದಿಜೋಗಿಸ್ ಜನಾಂಗದವರ ಅನಕ್ಷರತೆ, ಬಡತನ  ಮತ್ತು ತಮ್ಮ ಜನಾಂಗದ ಬಗ್ಗೆ ಧ್ವನಿ ಎತ್ತದ  ನಾಯಕರಿಲ್ಲದ ಕಾರಣ  ಕಳೆದ 08 ವರ್ಷಗಳಿಂದ ತುಮಕೂರು ಜಿಲ್ಲೆಯಲ್ಲಿ ಇತರೆ ಜನಾಂಗದವರು ಅಂದರೆ  ಅತಿ ಹೆಚ್ಚಾಗಿ ಹೇಳವ ಜನಾಂಗದವರು ಹಂದಿ ಸಾಕುವ ಮತ್ತು ಹಂದಿ ಮಾರಾಟ ಮಾಡುವ ಹೆಸರಿನಲ್ಲಿ ನಾವೇ ಹಂದಿಜೋಗಿಸ್ ಗಳೆಂದು ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ನಿಜವಾದ ಹಂದಿಜೋಗಿಸ್ ಜನಾಂಗದವರ ಮೇಲೆ ದೌರ್ಜನ್ಯಗಳನ್ನು ಮಾಡುತ್ತಿದ್ದು ನಿಜವಾದ ಅಲೆಮಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


    Provided by
    Provided by

    ಮನವಿಯ ಪ್ರಮುಖ ಅಂಶಗಳು:

    1. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಾತೇನಹಳ್ಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆನಂ 49ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 02 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಪಡೆದುಕೊಂಡಿರುತ್ತಾರೆ, ಗುಬ್ಬಿ ತಾಲ್ಲೂಕಿನ ಗುಬ್ಬಿ ಪೊಲೀಸ್ ಠಾಣೆಯ 100 ಮೀಟರ್ ಬಳಿ ಇರು ಬಂಗ್ಲೊಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಶಾಲಾ ದಾಖಲಾತಿಗಳಲ್ಲಿ ಹೆಳವ ಜಾತಿ ಇರುತ್ತದೆ, ಆದರೆ ಸಾತೇನಹಳ್ಳಿ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರ ಮಕ್ಕಳ ದಾಖಲಾತಿಯಲ್ಲಿ ಹಂದಿಜೋಗಿಸ್ ಎಂದು ದಾಖಲಿಸಿರುತ್ತಾರೆ.
    2. ತುಮಕೂರು ಜಿಲ್ಲೆ ಅಮಲಾಪುರ ಸರ್ವೆ ನಂ 31 ರಲ್ಲಿ ಹಂದಿಜೋಗಿಸ್ ಜನಾಂಗಕ್ಕೆ ಮೀಸಲಾಗಿದ್ದ 01 ಎಕರೆ ಜಮೀನಿನಲ್ಲಿ ಅಕ್ರಮ ನಿವೇಶನಗಳನ್ನು ಸುಳ್ಳು ಜಾತಿ ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುತ್ತಾರೆ ಇದನ್ನು ಪರಿಶೀಲಿಸಲು ತಮ್ಮಲ್ಲಿ ಮನವಿ.

    3.ಅಲೆಮಾರಿ ಬುಡಕಟ್ಟು ಅಭಿವೃದ್ದಿ ಮಹಾಸಭಾ ತುಮಕೂರು ಜಿಲ್ಲಾಧ್ಯಕ್ಷೆ ಶ್ರೀಮತಿ ರಾಮಕ್ಕ ಮೂಲತಃ ಹೆಳವ ಸಮುದಾಯಕ್ಕೆ ಸೇರಿದವರಾಗಿದ್ದು  ಇವರೇ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರದ ಸೂತ್ರದಾರರಾಗಿರುತ್ತಾರೆ.

    1. ಸದರಿ ಜಾತಿಯ ಪ್ರಮಾಣ ಪತ್ರಗಳು ಚಿಕ್ಕನಾಯಕನಹಳ್ಳಿ ಮತ್ತು ಸಿರಾ ತಾಲ್ಲೂಕಿನಲ್ಲಿಯೂ ಅಕ್ರಮವಾಗಿ ಪಡೆದುಕೊಂಡಿರುತ್ತಾರೆ.

    ಈ ಬಗ್ಗೆ ಈಗಾಗಲೇ ತುಮಕೂರು ಜಿಲ್ಲಾಧಿಕಾರಿಗಳಿಗೆ, ಮತ್ತು ಜಂಟಿ ನಿರ್ದೇಶಕರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ತುಮಕೂರು ಹಾಗೂ ಉಪ ಪೊಲೀಸ್ ಅಧೀಕ್ಷಕರು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ತುಮಕೂರು  ಮತ್ತು ವಿವಿಧ ತಾಲ್ಲೂಕಿನ ತಹಶೀಲ್ದಾರರಿಗೆ ಮನವಿ ನೀಡಿ ಸರಿಪಡಿಸಲು ಕೋರಿರುತ್ತದೆ. ಧ್ವನಿ ಇಲ್ಲದ ಸಮುದಾಯವಾದ್ದರಿಂದ ಯಾರು ಸಹ ಕ್ರಮ ಕೈಗೊಂಡಿರುವುದಿಲ್ಲ.  ದಯಮಾಡಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಅಕ್ರಮವಾಗಿ ಅಥವಾ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದಿರುವ ಹಂದಿಜೋಗಿಸ್  ಜಾತಿ  ಪ್ರಮಾಣ ಪತ್ರಗಳು ರದ್ದಾಗಬೇಕು ಮತ್ತು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

    ಈ ಸಂದರ್ಭದಲ್ಲಿ ತುಮಕೂರು  ಜಿಲ್ಲಾ ಹಂದಿಜೋಗಿಸ್ ಸಂಘದ ಅಧ್ಯಕ್ಷ ಮುಕುಂದ, ಉಪಾಧ್ಯಕ್ಷ ಶ್ರೀನಿವಾಸ್ , ಕಾರ್ಯದರ್ಶಿ ಚಂದ್ರಶೇಖರ್ ವೇಣು, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.