ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ ಸಂಕ್ರಾಂತಿ –ಸುಗ್ಗಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಟಗೆರೆ ತಾಲ್ಲೂಕು ಎಲೆರಾಂಪುರದ ಕುಂಚಿಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಹನುಮಂತನಾಥ ಸ್ವಾಮೀಜಿಯವರು ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಬಳಗದ ಅಧ್ಯಕ್ಷರಾದ ಲಲಿತಾ ಮಲ್ಲಪ್ಪನವರು ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕುಂಚಿಟಿಗ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀಧರ್ ಅವರು ಮತ್ತು ಜಿಲ್ಲಾ ಕುಂಚಿಟಿಗ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾದ ದೊಡ್ಡಲಿಂಗಪ್ಪನವರು ಹಾಗೂ ತುಮಕೂರಿನ ರಾಘು ಸ್ಕ್ಯಾನಿಂಗ್ ಸೆಂಟರ್‌ನ ಡಾ. ಚಂದ್ರಕಲಾ ಮತ್ತು ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಭವ್ಯ ರವರು ಆಗಮಿಸುವರು.
ಸಮಾಜದ ಎಲ್ಲಾ ಕುಲಬಾಂಧವರು ಕುಟುಂಬ ಸಮೇತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


