ತುಮಕೂರು: ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ 5–16 ವಯೋಮಾನದ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಮತ್ತು 5–12 ವಯೋಮಾನದ ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜನವರಿ 22ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳ ಪೋಷಕರು ಜನವರಿ 20ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಬಾಲಭವನ ಕಚೇರಿ, ಮಹಾತ್ಮ ಗಾಂಧಿ ರಸ್ತೆ, ತುಮಕೂರು ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಮೊ.ಸಂ. 9901890079ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


