ತುಮಕೂರು: ತುಮಕೂರಿನ ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸುರೇಂದ್ರನಾಥ ಡಿ.ಆರ್. ಮತ್ತು ಡಾ.ಶ್ವೇತಾ ಡಿ.ಎಸ್. ಇವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.
ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿಗಳು ಹಲವು ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಸರ್ಕಾರಿ ಚಿತ್ರಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿಕೊಂಡಿತ್ತು. ಈ ಸಂಬಂಧ ಕಾಲೇಜಿಗೆ ಭೇಟಿ ನೀಡಿದ ಪ್ರಾದೇಶಿಕ ಜಂಟಿ ನಿರ್ದೇಶಕರು ಹಾಗೂ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು ವಿಚಾರಣೆ ನಡೆಸಿ ಸಲ್ಲಿಸಿದ ವರದಿಯನ್ವಯ ಈ ಕ್ರಮಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುವ ಉಪನ್ಯಾಸಕರಿಗೆ ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ, ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟಕ್ಕೆ ತಡವಾಗಿಯಾದರೂ ಜಯ ಸಿಕ್ಕಿದೆ. ಹೋರಾಟಕ್ಕೆ ಸಹಕರಿಸಿದ ಎಲ್ಲ ಸಂಘಟನೆಗಳಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಕೃತಜ್ಞತೆ ಸಲ್ಲಿಸುವುದಾಗಿ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್., ಖಜಾಂಚಿ ಮಹಮದ್ ಗೌಸ್ ಪೀರ್, ಕಾರ್ಯದರ್ಶಿ ರಂಗಸ್ವಾಮಿ, ನಿಕಟಪೂರ್ವ ಕಾರ್ಯದರ್ಶಿ ಯತೀಶ್ ಕುಮಾರ್ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ವಿದ್ಯಾರ್ಥಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


