ಪಾವಗಡ: ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರಿಯಮ್ಮನ ಪಾಳ್ಯ ಶಾಲೆಯ ಮಕ್ಕಳಿಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಉಚಿತ ಸಮವಸ್ತ್ರ ನೋಟ್ ಪುಸ್ತಕ ಲೇಖನಿ ಸಾಮಗ್ರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು
ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಲೇಖನಿ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮರವರು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯ ಉಳಿವಿಗೆ ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದು ಸರ್ಕಾರಿ ಶಾಲೆ ಉಳಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕು ಎಂದರು ಹಾಗೆಯೇ ವಾಲ್ಮೀಕಿ ಜಾಗೃತಿ ವೇದಿಕೆಯ ವತಿಯಿಂದ ಇಂದು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಪ್ರಶಂಸಿಸಿ ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಕ್ರಮ ಉದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡಿ ಬಡ ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ದೇಶದ ಅಭಿವೃದ್ಧಿಗೆ ಕೈಜೋಡಿಸಿ ದಂತಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೇಣು ರೆಡ್ಡಿ ಇ.ಸಿ.ಓ. ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ಮಾರುತೇಶ್, ಉಪಾಧ್ಯಕ್ಷರುಗಳಾದ ರಾಮಾಂಜನೇಯ, ಕೆ. ಗಂಗಾಧರ್, ಜಿಲ್ಲಾ ನಿರ್ದೇಶಕ ಪ್ರಸಾದ್, ತಾಲೂಕು ನೌಕರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಜಯಲಕ್ಷ್ಮಿ, ಸಿ.ಆರ್.ಪಿ.ತಿಪ್ಪೇಸ್ವಾಮಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ನಾಯಕ ಕಾರ್ಯಕ್ರಮ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಾಗೃತಿ ವೇದಿಕೆಯ ಈ ಕಾರ್ಯಕ್ರಮಕ್ಕೆ ದೇಣಿಗೆ ನೀಡಿದ ಪದಾಧಿಕಾರಿಗಳಾದ ಲೋಕೇಶ್ ಪಾಳೇಗಾರ್, ಶ್ರೀನಿವಾಸ್ ನಾಯಕ, ಭಾಸ್ಕರ್ ನಾಯಕ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಪಾಳೇಗಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಆದಿ ಲಕ್ಷ್ಮಿ, ಉಪಾಧ್ಯಕ್ಷರಾದ ಲತಮ್ಮ, ಅಂಗನವಾಡಿ ಕಾರ್ಯಕರ್ತೆ ರಂಗಮ್ಮ, ದೈಹಿಕ ಶಿಕ್ಷಕ ರಾಜ್ ಗೋಪಾಲ್, ಅತಿಥಿ ಶಿಕ್ಷಕ ರಮೇಶ್, ನಿಡಗಲ್ ಹೋಬಳಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಓಂಕಾರ ನಾಯಕ, ನಿವೃತ್ತ ಸೈನಿಕ ಅನಂತಯ್ಯ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ರಾಮಪ್ಪ, ಮಾಜಿ ಎಸ್.ಡಿ.ಎಮ್.ಸಿ. ಅಧ್ಯಕ್ಷ ತಿಮ್ಮರಾಜ್, ಗೋಪಾಲಪ್ಪ, ಚಿನ್ನಪ್ಪ, ಮಾರುತಿ, ಅಂಜಿನಾಯಕ, ಸಣ್ಣ ರಾಮಪ್ಪಮುಂತಾದವರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


