ಶಿರಾ: ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ಜ. 24 ರಂದು ಶಿರಾ ನಗರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಲಿದೆ.
ಅಂದು ಮಧ್ಯಾಹ್ನ 1.30ಕ್ಕೆ ಶ್ರೀವಿದ್ಯಾ ಗಣಪತಿ ದೇವಸ್ಥಾನದ ಆವರಣದಿಂದ ಶೋಭಾಯಾತ್ರೆ ಆರಂಭವಾಗಲಿದ್ದು, ಸಂಜೆ 4 ಘಂಟೆಗೆ ಪ್ರೆಸಿಡೆನ್ಸಿ ಶಾಲಾ ಸಮೀಪದ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಯಲಿದೆ. ಆರ್‌ಎಸ್‌ಎಸ್ ಜಿಲ್ಲಾ ವಿಭಾಗದ ಪ್ರಚಾರಕ್ ಶಿವರಾಜು ಮುಖ್ಯ ಭಾಷಣ ಮಾಡಲಿರುವರು.
ಶ್ರೀನಂಜಾವಧೂತ ಸ್ವಾಮೀಜಿ, ಶ್ರೀ ಚಿದಾನಂದ ಭಾರತಿ ಸ್ವಾಮೀಜಿ, ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಸೇವಾಲಾಲ್ ಸರ್ದಾರ್ ಸ್ವಾಮೀಜಿ, ಶ್ರೀ ಬಸವ ರಮಾನಂದ ಸ್ವಾಮೀಜಿ, ಶ್ರೀ ಮೇದಾರ ಇಮವಿಧೇಯಕಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಶ್ರೀ ವೇದ ಶಿವಶರಣ ದಶರಥ ಗೋಸಾಯಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


